ದ.ಕ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮೊಗ್ರ ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಇವುಗಳ ಸಹಯೋಗದೊಂದಿಗೆ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮ ಗುತ್ತಿಗಾರು ಪ್ರಾ.ಆ.ಕೇಂದ್ರದಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕ ಬಸವರಾಜ್ ಶಿಶು ಆರೈಕೆ ಬಗ್ಗೆ ತಾಯಂದಿರಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಕೊರೋನ ನಿರ್ಮೂಲನಾ ಪ್ರತಿಜ್ಞೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಿರಿಯ ಆರೋಗ್ಯ ಸಹಾಯಕಿ ಜಯಶ್ರೀ, ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ಮತ್ತು ತಾಯಂದಿರು ಭಾಗವಹಿಸಿದ್ದರು.