
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ನ.24ರಂದು ಮಂಗಳೂರು ಬೊಕ್ಕಪಟ್ಣ ಶ್ರೀಬ್ರಹ್ಮ ಬಬ್ಬರ್ಯ ದೈವಸ್ಥಾನದ ಹಿಂದುಗಡೆಯ ರಾಣಿ ಅಬ್ಬಕ್ಕ ನೌಕೆಯಲ್ಲಿ ನಡೆಯಲಿದೆ.
ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಕ್ಷೇತ್ರ ಶಾಸಕ ಯು.ಟಿ.ಖಾದರ್ ಮತ್ತು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ರಾಜ್ಯಾಧ್ಯಕ್ಷ ಬಿ.ನಾರಾಯಣರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಂಪಿ ಕನ್ನಡ ವಿವಿ ನಿವೃತ್ತ ಪ್ರೊಫೆಸರ್ ಡಾ.ಚಂದ್ರ ಪೂಜಾರಿ ರವರು ‘ಅಭಿವ್ಯಕ್ತಿ ಸ್ವಾತಂತ್ರ್ಯ-ತತ್ವ ಮತ್ತು ಆಚರಣೆ’ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕೆ.ಜೆ.ಯು ದ.ಕ.ಜಿಲ್ಲಾಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರತಿ ತಾಲೂಕಿನಿಂದ ಓರ್ವ ಹಿರಿಯ ಪತ್ರಕರ್ತರನ್ನು ಗುರುತಿಸಿ ಸನ್ಮಾನಕ್ಕೆ ಆಯ್ಕೆ ಮಾಡಲಾಗಿದ್ದು, ಸುಳ್ಯದ ಹಿರಿಯ ಪತ್ರಕರ್ತ, ಅಮರ ಸುಳ್ಯ ಸುದ್ದಿ ವಾರಪತ್ರಿಕೆಯ ಗೌರವ ಸಂಪಾದಕ ಜಯಪ್ರಕಾಶ್ ಕುಕ್ಕೆಟ್ಟಿ ಯವರನ್ನು ಆಯ್ಕೆ ಮಾಡಲಾಗಿದೆ.