Ad Widget

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪುತ್ತೂರು ಎಸಿ ಡಾ.ಯತೀಶ್ ಉಳ್ಳಾಲ್ ನೇಮಕ


ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರನ್ನು ನೇಮಕ ಮಾಡಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಕಾರದ ಮೇಲಿನ ಉಲ್ಲೇಖದ ಆದೇಶದ ಪ್ರಕಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ವಿಧಿ 29 ರನ್ವಯ ದೇವಾಲಯದ ದೈನಂದಿನ ಆಡಳಿತ ನಿರ್ವಹಣೆ ಹಾಗೂ ಆರ್ಥಿಕ ವ್ಯವಹಾರಗಳನ್ನು ನಿರ್ವಹಿಸುವ ಹಿತದೃಷ್ಟಿಯಿಂದ ದಕ್ಚಿಣ ಕನ್ನಡ ಅಪರ ಜಿಲ್ಲಾಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ವ್ಯವಸ್ಥಾಪನಾ ಸಮಿತಿ ರಚನೆ ಆಗುವವರೆಗೂ ಅಥವಾ 6 ತಿಂಗಳ ಅವಧಿಯ ವರೆಗೆ ಇದರಲ್ಲಿ ಯಾವುದು ಮೊದಲೇ ಅಲ್ಲಿಯವರೆಗೆ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿತ್ತು.

. . . . . . . . .

ಅಪರ ಜಿಲ್ಲಾಧಿಕಾರಿಯವರಿಗೆ ಕಚೇರಿಯಲ್ಲಿ ಕೆಲಸದ ಒತ್ತಡ ಇರುವುದರಿಂದ ಹಾಗೂ ಸದ್ರಿ ದೇವಸ್ಥಾನದಲ್ಲಿ ಮುಂಬರುವ ಡಿಸೆಂಬರ್ ತಿಂಗಳಲ್ಲಿ ಚಂಪಾ ಷಷ್ಠಿ ಉತ್ಸವ ಇರುವುದರಿಂದ, ಸದ್ರಿ ಉತ್ಸವದ ಉಸ್ತುವಾರಿ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಭಾಗಿಯಾಗಲು ಸಾಧ್ಯವಾಗದಿರುವುದರಿಂದ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಅಪರ ಜಿಲ್ಲಾಧಿಕಾರಿಯ ಬದಲಿಗೆ ಆಡಳಿತಾಧಿಕಾರಿ ಹುದ್ದೆಗೆ ಸಹಾಯಕ ಆಯುಕ್ತರನ್ನು ನೇಮಕಾತಿ ಮಾಡಲಾಗಿದೆ.
ಮುಂದಿನ ಆರು ತಿಂಗಳ ಅವಧಿಗೆ ಅಥವಾ ನಿಯಮಾನುಸಾರ ವ್ಯವಸ್ಥಾಪನಾ ಸಮಿತಿ ರಚನೆ ಆಗುವಲ್ಲಿಯವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಉರ್ಜಿತದಲ್ಲಿರುವಂತೆ ಹಾಗೂ ಸಕ್ಷಮ ಪ್ರಾಧಿಕಾರದ ಘಟನೋತ್ತರ ಮಂಜೂರಾತಿ ನಿರೀಕ್ಷಣೆ ಮೇರೆಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading