
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡುವ ಪ್ರೋತ್ಸಾಹಕ ಪ್ರಶಸ್ತಿಗೆ ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪ.ಸ.ಸಂಘ ಆಯ್ಕೆಯಾಗಿದೆ. ಮಂಗಳೂರಿನಲ್ಲಿ ನ.27 ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ
ಜಯಪ್ರಕಾಶ್ ಕೂಜುಗೋಡು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್ ಕಟ್ಟೆಮನೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ರವರಿಂದ ಪ್ರಶಸ್ತಿ
ಸ್ವೀಕರಿಸಿದರು. ಸಂಘವು 2019-20ನೇ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಗಣನೀಯ ಪ್ರಗತಿಯನ್ನು ಗಣನೀಯ ಪ್ರಗತಿಯನ್ನು ಗುರುತಿಸಿ ದ.ಕ.ಜಿಲ್ಲಾ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ.