ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರಂತೋಡಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಅರಂತೋಡು ಗ್ರಾಮದ ಪಿಂಡಿಮನೆ ನಿವಾಸಿ ಮಾಧವ ಗೌಡರ ಮಗ ಪ್ರವೀಣ್ (39) ಎಂದು ಗುರುತಿಸಲಾಗಿದೆ. ಕೆಲ ವರ್ಷಗಳ ಹಿಂದೆ ಮೆಸ್ಕಾಂ ಸ್ಟೇಷನ್ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಾರದ ಹಿಂದೆ ರಾತ್ರಿ ಪುತ್ತೂರಿನಿಂದ ಬರುತ್ತಿದ್ದ ವೇಳೆ ಬೈಕಿನಲ್ಲಿ ಬರುತ್ತಿದ್ದಾಗ ದನ ಅಡ್ಡಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಉರುಳಿ ಬಿದ್ದ ಪರಿಣಾಮ ಹಿಂಬದಿ ಸವಾರನಾಗಿದ್ದ ಪ್ರವೀಣ್ ಅವರು ಗಂಭೀರ ಗಾಯಗೊಂಡಿದ್ದರು. ಬೈಕ್ ಚಾಲನೆ ಮಾಡುತ್ತಿದ್ದಾತ ಪ್ರಾಣಾಪಾಯದಿಂದ ಪಾರಾಗಿದ್ದರು. ಪ್ರವೀಣ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ತಲೆ ಹಾಗೂ ಕಣ್ಣಿನ ಭಾಗಕ್ಕೆ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರೆಂದು ತಿಳಿದುಬಂದಿದೆ.
- Saturday
- November 23rd, 2024