ಕಲ್ಲಾಜೆ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕರಾಗಿ ಡೆಪ್ಟೇಶನ್ ಮೂಲಕ ಬಾನಡ್ಕ ಕಿ.ಪ್ರಾ.ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಮಾಸ್ತರ್ ಮಾದನಮನೆಯವರು ಡಿ. 1ರಂದು ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ 52 ವರ್ಷ ವಯಸ್ಸಾಗಿತ್ತು. ವಿಶೇಷ ಚೇತನ ಮಕ್ಕಳ ಏಳಿಗೆಗಾಗಿ ಶಶಾಂಕ ಚಾರಿಟೇಬಲ್ ಟ್ರಸ್ಟ್‌ನ್ನು ಸ್ಥಾಪಿಸಿ ಆ ಮೂಲಕ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜನಾನುರಾಗಿಯಾಗಿಯಾಗಿದ್ದರು. ಮೃತರು ಪತ್ನಿ ಬಾನಡ್ಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಾನಕಿ ಮುತ್ತಪ್ಪ ಮಾಸ್ತರ್, ಪುತ್ರ ಶಶಾಂಕ ಮಾದನಮನೆ ಹಾಗೂ ಕುಟುಂಬಸ್ಥರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
- Thursday
- December 5th, 2024