
ವಸಂತ ಶೆಟ್ಟಿ ಬೆಳ್ಳಾರೆಯವರ ಮುಂದಾಳತ್ವದಲ್ಲಿ ‘ನಿನಾದ’ ಸಾಂಸ್ಕೃತಿಕ ಕಲಾ ಕೇಂದ್ರದ ಉದ್ಘಾಟನೆ ಮತ್ತು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಕಾಲಮಿತಿ ಯಕ್ಷಗಾನ ಮಾನಿಷಾದ ಡಿ. 05 ರಂದು ಸಂಜೆ ಕಳಂಜ ಗ್ರಾಮದ ತಂಟೆಪ್ಪಾಡಿಯ ನಿನಾದ ಕಲಾಕೇಂದ್ರದಲ್ಲಿ ನಡೆಯಲಿದ್ದು, ಈ ಬಗ್ಗೆ ಪತ್ರಿಕಾಗೋಷ್ಠಿಯು ಡಿ.04ರಂದು ನಿನಾದದಲ್ಲಿ ನಡೆಯಿತು. ಟ್ರಸ್ಟ್‌ನ ಕಾರ್ಯದರ್ಶಿ ವಸಂತ ಶೆಟ್ಟಿ ಬೆಳ್ಳಾರೆಯವರು ಟ್ರಸ್ಟ್‌ನ ಕಾರ್ಯವೈಖರಿಯ ಹಾಗೂ ಧ್ಯೇಯೋದ್ದೇಶಗಳ ಬಗ್ಗೆ ಮಾತನಾಡಿ ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ ಸಂಪನ್ಮೂಲ ವ್ಯಕ್ತಿಗಳ ಮುಖಾಂತರ ಸೂಕ್ತ ತರಬೇತಿ, ಮಾರ್ಗದರ್ಶನವನ್ನು ನೀಡಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಹಂಬಲದೊಂದಿಗೆ ಬೇರೆ ಬೇರೆ ಕಲಾಪ್ರಕಾರಗಳ ಪ್ರದರ್ಶನ ಈ ನಿನಾದ ವೇದಿಕೆಯ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ನೀಡುವ ಉದ್ದೇಶವನ್ನು ಹೊಂದಿದೆ ಎಂದರು. ಈ ಸಂದರ್ಭದಲ್ಲಿ ಟ್ರಸ್ಟ್‌ನ ಅಧ್ಯಕ್ಷರಾದ ಐತ್ತಪ್ಪ ಶೆಟ್ಟಿ.ಪಿ, ಉಪಾಧ್ಯಕ್ಷರಾದ ವಾಸಪ್ಪ ಶೆಟ್ಟಿ ಟಿ, ಜತೆ ಕಾರ್ಯದರ್ಶಿಯಾದ ಪಿ. ಪ್ರಮೋದ್ ಕುಮಾರ್ ರೈ ಉಪಸ್ಥಿತರಿದ್ದರು. ಟ್ರಸ್ಟಿ ಕು. ಹಿತೈಷಿ ಶೆಟ್ಟಿ ಸ್ವಾಗತಿಸಿ, ಉಪಾಧ್ಯಕ್ಷರಾದ ವಾಸಪ್ಪ ಶೆಟ್ಟಿ.ಟಿ ವಂದಿಸಿದರು.
