
ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿಗಳಾದ ಎಚ್ .ಭೀಮರಾವ್ ವಾಷ್ಠರ್ ಕೋಡಿಹಾಳ ರವರಿಗೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿಯ ಕೋಟೆ ವೀರಣ್ಣ ರಂಗಮಂದಿರದಲ್ಲಿ ಎರಡು ದಿನಗಳಿಂದ ನಡೆದ ರಾಜ್ಯಮಟ್ಟದ ಬೆಳಕು ಸಾಹಿತ್ಯೋತ್ಸವ ಸಮಾರಂಭದಲ್ಲಿ ಸನ್ಮಾನ ಕಾರ್ಯಕ್ರಮ ನೆರವೇರಿತು . ಎಚ್ .ಭೀಮರಾವ್ ವಾಷ್ಠರ್ ರವರು ಅಲ್ಲಿ ನಡೆದ ರಾಜ್ಯಮಟ್ಟದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದಾಗ ಅವರ ಸಮಗ್ರ ಸಾಹಿತ್ಯ ಸಾಧನೆ ಪರಿಗಣಿಸಿ ಭವ್ಯ ವೇದಿಕೆಯಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಮಂಜಮ್ಮ ಜೋಗತಿ ರವರು ಸನ್ಮಾನಿಸಿ ಗೌರವಿಸಿದರು . ಈ ಸಂದರ್ಭದಲ್ಲಿ ಬೆಳಕು ಸಂಸ್ಥೆಯ ಸಂಸ್ಥಾಪಕರಾದ ಅಣ್ಣಪ್ಪ ಮೇಟಿಗೌಡ , ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಅರಳಿ ನಾಗರಾಜ್ , ಹಿರಿಯ ಸಾಹಿತಿ ಮಹಾಂತಪ್ಪ ಮೇಟಿಗೌಡ , ಸರ್ವಾಧ್ಯಕ್ಷರಾದ ಕರಿಬಸಯ್ಯ ಹಿರೇಮಠ , ವಿಜಯದಾಸ್ ನವಲಿ , ವೆಂಕನಗೌಡ ವಟಗಲ್ , ಸೂಗನಗೌಡ ಗದ್ರಟಗಿ ಇನ್ನಿತರರು ಉಪಸ್ಥಿತರಿದ್ದರು .