
ರೈತ ಕಾರ್ಮಿಕ ದಲಿತ ಒಕ್ಕೂಟವು ಕೇಂದ್ರ ಸರಕಾರದ ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಕರೆ ನೀಡಿರುವ ಡಿ.8 ರಂದು ಕರೆ ನೀಡಿರುವ ಭಾರತ ಬಂದ್ ಗೆ ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರ ಘಟಕ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಸಂಚಾಲಕ ಅಶೋಕ್ ಎಡಮಲೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.