
ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಹೊಸ ತಹಶೀಲ್ದಾರ್ ಆಗಿ ಕು.ಅನಿತಾಲಕ್ಷ್ಮೀ ಅವರನ್ನು ನೇಮಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಸುಳ್ಯ ತಹಶೀಲ್ದಾರ್ ಅನಂತಶಂಕರ್ ರವರು ಕಡಬ ತಹಶೀಲ್ದಾರ್ ಆಗಿಯೂ ಕಾರ್ಯ ನಿರ್ವಹಿಸುತ್ತಿರುವುದರಿಂದ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಶಾಖೆಯ ತಹಶೀಲ್ದಾರ್ ಆಗಿರುವ ಕು. ಅನಿತಾಲಕ್ಷ್ಮೀ ಅವರನ್ನು ಸುಳ್ಯ ತಹಶೀಲ್ದಾರ್ ಆಗಿ ಜಿಲ್ಲಾಧಿಕಾರಿಗಳು ನೇಮಿಸಿರುವುದಾಗಿ ತಿಳಿದುಬಂದಿದೆ.