Ad Widget

ಸುಳ್ಯ : ಮಕ್ಕಳ ಹಕ್ಕು ಮತ್ತು ರಕ್ಷಣೆಯ ಕುರಿತು ಸಂವಾದ ಕಾರ್ಯಕ್ರಮ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಯೂನಿಸೆಫ್ ಹೈದ್ರಾಬಾದ್, ತಾಲೂಕು ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ತಾಲೂಕು ಇದರ ಸಹಭಾಗಿತ್ವದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತು ಸಂವಾದ ಕಾರ್ಯಕ್ರಮ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಮಿತಿ ಸದಸ್ಯ ಶಂಕರಪ್ಪ ರವರ ನೇತೃತ್ವದಲ್ಲಿ ಸುಳ್ಯ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಡಿ.8ರಂದು ನಡೆಯಿತು.

. . . . . . .

ಈ ಕಾರ್ಯಕ್ರಮವನ್ನು ಶಂಕರಪ್ಪ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೇಗಸ್ ಮಕ್ಕಳ ಸಂರಕ್ಷಣೆ ಮತ್ತು ಅವರ ಹಕ್ಕುಗಳ ಕುರಿತು ಪ್ರಾಸ್ತಾವಿಕ ಮಾತನಾಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಮಾತನಾಡಿ ಸುಳ್ಯ ತಾಲೂಕಿನಾದ್ಯಂತ ವಿವಿಧ ಸಂಘಟನೆಗಳು, ತಾಲೂಕು ಶಿಕ್ಷಣ ಅಧಿಕಾರಿಗಳ ಕೇಂದ್ರ, ಮಕ್ಕಳ ಮತ್ತು ಶಿಶು ಕಲ್ಯಾಣ ಅಭಿವೃದ್ಧಿ ಕೇಂದ್ರ, ಮಂಗಳೂರು ಪಡಿ ಸಂಸ್ಥೆಗಳು ಮಕ್ಕಳ ರಕ್ಷಣೆ ಮತ್ತು ಹಕ್ಕುಗಳ ಕುರಿತು ಸುಳ್ಯದಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು ಈ ಎಲ್ಲಾ ಕಾರ್ಯಕ್ರಮಗಳು ಕಾರ್ಯಗತ ಗೊಳಿಸಬೇಕಾಗಿದೆ. ಮಕ್ಕಳ ರಕ್ಷಣೆ ಮತ್ತು ಅವರ ಶಿಕ್ಷಣದ ಬಗ್ಗೆ ಎಲ್ಲ ಇಲಾಖೆಗಳು ಗಮನ ಹರಿಸಿ ಕೊಳ್ಳಬೇಕಾಗಿದೆ. ಅವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ಸಹಕರಿಸಬೇಕಾಗಿದೆ ಎಂದು ಹೇಳಿದರು. ಸಂವಾದ ಕಾರ್ಯಕ್ರಮ ನಡೆಸಿದ ಶಂಕರಪ್ಪ ರವರು ಮಕ್ಕಳ ರಕ್ಷಣೆ ಮತ್ತು ಹಕ್ಕುಗಳ ಕುರಿತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಶಿಕ್ಷಕ-ಶಿಕ್ಷಕಿಯರು, ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮಕ್ಕಳು ಎಂದರೆ ಯಾರು, ಹಾಗೂ ಅವರ ರಕ್ಷಣೆ ಮತ್ತು ಹಕ್ಕುಗಳ ಕುರಿತು ಸಂಕ್ಷಿಪ್ತವಾಗಿ ಸಂವಾದ ನಡೆಸಿದರು. ಮಕ್ಕಳ ಮೇಲಿನ ದೌರ್ಜನ್ಯ, ಅವರಿಗೆ ಸಿಗಬೇಕಾದ ಕಾನೂನಿನ ಸಲಹೆಗಳು, ಅವರಿಗೆ ನೀಡಬೇಕಾದ ಧೈರ್ಯ ಗಳು, ಪ್ರೋತ್ಸಾಹಗಳು ವಿವರಗಳನ್ನು ಆಕರ್ಷಕ ಶೈಲಿಯಲ್ಲಿ ವಿವರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರೊಂದಿಗೆ ಮಕ್ಕಳ ಹಕ್ಕು ಮತ್ತು ರಕ್ಷಣೆ ಗಳ ಗುರುತು ಪ್ರಶ್ನೆಯನ್ನು ಕೇಳುತ್ತಾ ಅವರನ್ನು ಪ್ರೋತ್ಸಾಹಿಸಿದರು. ಮಕ್ಕಳ ಹಕ್ಕು ಮತ್ತು ರಕ್ಷಣೆ ಕುರಿತು ಸೇರಿದ ವಿವಿಧ ಇಲಾಖೆಯವರು ಅವರಿಂದ ಮಾಹಿತಿಗಳನ್ನು ಕೇಳಿ ತಿಳಿದುಕೊಂಡರು. ವೇದಿಕೆಯಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ಎಸ್.ಪಿ ಮಹದೇವ,ಸಿ.ಡಿ.ಪಿ.ಒ. ರಶ್ಮಿ, ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!