
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2019-20ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ. 12 ರ ಶನಿವಾರ (ನಾಳೆ) ಪೂ. 10.30ಕ್ಕೆ ಸರಿಯಾಗಿ ಸಂಘದ ಅಧ್ಯಕ್ಷರಾದ ಕೂಸಪ್ಪ ಗೌಡ ಮುಗುಪ್ಪುರವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಛೇರಿ ಕೋಟೆಮುಂಡುಗಾರಿನ ಸಭಾಂಗಣದಲ್ಲಿ ಜರುಗಲಿದೆ. ಸಂಘದ ಎಲ್ಲಾ ಸದಸ್ಯರು ಸಭೆಗೆ ಸಕಾಲಕ್ಕೆ ಹಾಜರಾಗಿ ಸಭೆಯ ಕಾರ್ಯ ಕಲಾಪಗಳನ್ನು ನೆರವೇರಿಸಿಕೊಡುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ವೆಂಕಪ್ಪಯ್ಯರವರು ತಿಳಿಸಿದ್ದಾರೆ.