ಗ್ರಾಮ ಪಂಚಾಯತ್ ಚುನಾವಣೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳು ಮಾಜಿ ವಿಧಾನಪರಿಷತ್ ಮುಖ್ಯ ಸಚೇತಕ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆಗೆ ಆಗಮಿಸಿ ಮುಂಬರುವ ಗ್ರಾಮ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ತಯಾರಿ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಳ್ಯ ಬ್ಲಾಕ್ ಉಸ್ತುವಾರಿ ಗಳು ಶ್ರೀ ಸದಾ ಶಿವ ಶೆಟ್ಟಿ, ಸುಳ್ಯಬ್ಲಾಕ್ ಕಾಂಗ್ರೆಸ್ ಕೆಪಿಸಿಸಿ ಉಸ್ತುವಾರಿ ಕೃಷ್ಣಪ್ಪ ಜಿ, ಕಡಬ ಬ್ಲಾಕ್ ಉಸ್ತುವಾರಿ ನಂದಕುಮಾರ್ ಮಡಿಕೇರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಗ್ರಾಮ ಪಂಚಾಯತ್ ಚುನಾವಣೆಯ ಗ್ರಾಮ ವಸ್ತುವಾರಿ ಗಳು, ಗ್ರಾಮ ಅಧ್ಯಕ್ಷರುಗಳು, ಅಭ್ಯರ್ಥಿಗಳು, ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ನ ನಾಯಕರುಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.