ಸರಕಾರದ ಆದೇಶದಂತೆ ಜ.1ರಿಂದ ದ್ವಿತೀಯ ಪಿಯು ಮತ್ತು ಎಸ್ಎಸ್ಎಲ್ಸಿ ತರಗತಿಗಳು ಆರಂಭವಾಗುವ ಹಿನ್ನೆಲೆಯಲ್ಲಿ ಮಂಗಳವಾರ ಸುಬ್ರಹ್ಮಣ್ಯದ ಎಸ್ಎಸ್ಪಿಯು ಕಾಲೇಜಿನಲ್ಲಿ
ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕೋವಿಡ್-19 ಪರೀಕ್ಷೆ ನಡೆಯಿತು. ಪ್ರಯೋಗಶಾಲಾ ತಜ್ಞರಾದ ಅಮಿತಾ ಮತ್ತು ನೀತಾ ಪರೀಕ್ಷಾ ಕಾರ್ಯ ನೆರವೇರಿಸಿದರು. ಆರೋಗ್ಯ ಕೇಂದ್ರದ ಸಿಬ್ಬಂಧಿ ಹೊನ್ನಪ್ಪ ಗೌಡ ಸಹಕರಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಆಗಮಿಸಿ, ತರಗತಿಗಳು ಆರಂಭವಾಗುವ ಈ ಸಮಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸದೃಢತೆಗೆ ಬೇಕಾದ ಸಂಪೂರ್ಣ
ಸಹಕಾರವನ್ನು ಕಾಲೇಜಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ನೀಡುವ ಭರವಸೆ ನೀಡಿದರು. ಉಪನ್ಯಾಸಕರು, ಶಿಕ್ಷಕರು, ಬೋಧಕೇತರರು, ಸುಬ್ರಹ್ಮಣ್ಯ ಪರಿಸರದ ಪ್ರಾಥಮಿಕ ಶಾಲೆಗಳ ಶಿಕ್ಷಕರು ಸೇರಿದಂತೆ 100ಕ್ಕೂ ಅಧಿಕ ಮಂದಿ ಪರೀಕ್ಷೆ ಮಾಡಿಸಿಕೊಂಡರು.ಈ ಮೊದಲು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪರೀಕ್ಷೆ ನಡೆಸಲಾಗಿದ್ದು ಸುಮಾರು 55 ಮಂದಿ ತಪಾಸಣೆ ಮಾಡಿಸಿಕೊಂಡರು.
ಈ ಸಂದರ್ಭ ಪ್ರೌಢಶಾಲಾ ವಿಭಾಗದ ಮುಖ್ಯಗುರು ಕೆ.ಯಶವಂತ ರೈ, ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಜಯಶ್ರೀ ವಿ. ದಂಬೆಕೋಡಿ, ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್ ಸೇರಿದಂತೆ ಉಪನ್ಯಾಸಕರು, ಶಿಕ್ಷಕರು ಉಪಸ್ಥಿತರಿದ್ದರು.
- Friday
- November 1st, 2024