
ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನ ರಾಜ್ಯಶಾಸ್ತ್ರ ವಿಭಾಗದಲ್ಲಿ ಸ್ವಾತಿ.ಕೆ ರವರು ಉತ್ತೀರ್ಣರಾಗಿದ್ದಾರೆ.
ಇವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ರಾಜ್ಯಶಾಸ್ತ್ರ ವಿಭಾಗದಲ್ಲಿ ಎಂ.ಎ ಪದವಿಯನ್ನು ಪಡೆದಿದ್ದು, ಪ್ರಸ್ತುತ ಸುಬ್ರಹ್ಮಣ್ಯದ ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮದ ಕುದುರೆಮಜಲ್ ಸೀತಾರಾಮ ಗೌಡ ಮತ್ತು ಚೆನ್ನಮ್ಮ ದಂಪತಿಗಳ ಪುತ್ರಿ. ಬೆಳ್ಳಾರೆಯ ಜ್ಞಾನಗಂಗಾ ದಲ್ಲಿ ಚಿತ್ರಕಲಾ ಶಿಕ್ಷಕರಾಗಿರುವ ಶಿವಪ್ರಸಾದ್ ಕುಳ್ಳಂಪಾಡಿ ಇವರ ಪತ್ನಿ.