ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ ತ್ರೈಮಾಸಿಕ ಸಭೆ ಜ.10 ರಂದು ನಡೆಯಿತು.
ಕೊರೊನಾ ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ ತ್ರೈಮಾಸಿಕ ಸಭೆಯು ಸುಮಾರು 10 ತಿಂಗಳ ಬಳಿಕ ಎಲ್ಲಾ ರೀತಿಯ ಸುರಕ್ಷಾ ಕ್ರಮಗಳೊಂದಿಗೆ ಹರಿಹರ ಪಲ್ಲತ್ತಡ್ಕ ದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮೇಲ್ವಿಚಾರಕ ಸೀತಾರಾಮ, ಸೇವಾಪ್ರತಿನಿಧಿ ರೇಖಾ, ಒಕ್ಕೂಟದ ಅಧ್ಯಕ್ಷ ಬಾಲಸುಬ್ರಹ್ಮಣ್ಯ, ತಾಂತ್ರಿಕ ಸಲಹೆಗಾರ ಮಣಿಕಂಠ ಕಟ್ಟ, ನಿಕಟಪೂರ್ವಾಧ್ಯಕ್ಷ ಹರ್ಷ ಪಾಲ್ತಾಡು ಮತ್ತು ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.
✍ವರದಿ:-ಉಲ್ಲಾಸ್ ಕಜ್ಜೋಡಿ