ಸುಳ್ಯದಲ್ಲಿ ಆರು ಬಾರಿ ಶಾಸಕರಾಗಿ ಜನರ ಮೆಚ್ಚುಗೆಗೆ ಪಾತ್ರರಾಗಿ ಇದೀಗ ನೂತನ ಸಚಿವರಾಗುತ್ತಿರುವ ಶಾಸಕ ಅಂಗಾರರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಪಕ್ಷದ ಕೆಲ ಪ್ರಮುಖರು,ಅಭಿಮಾನಿಗಳು ಇಂದು ಬೆಂಗಳೂರಿಗೆ ತಲುಪಿದ್ದು ನೂತನ ಸಚಿವರಾಗಲಿರುವ ಅಂಗಾರರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಬಿಜೆಪಿ ರೈತ ಮೋರ್ಛಾ ಉಪಾಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಸುಳ್ಯ ಮಂಡಲ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಪಿಎಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ, ಗುತ್ತಿಗಾರು ಗ್ರಾ.ಪಂ.ಮಾಜಿ ಅಧ್ಯಕ್ಷ ಅಚ್ಚುತ ಗುತ್ತಿಗಾರು ಮತ್ತಿತರರು ಬೆಂಗಳೂರಿನಲ್ಲಿ ಅಭಿನಂದಿಸಿದರು.
- Saturday
- November 23rd, 2024