
ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಆರು ಬಾರಿ ಶಾಸಕರಾಗಿ ಆಯ್ಕೆಯಾದ ಸೋಲಿಲ್ಲದ ಸರದಾರ ರಾಗಿರುವ ಎಸ್.ಅಂಗಾರ ಅವರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಪ್ರಪ್ರಥಮ ಬಾರಿಗೆ ನೂತನ ಸಚಿವರಾಗಿ ಇಂದು ಅಪರಾಹ್ನ 3.50 ಕ್ಕೆ ಬೆಂಗಳೂರಿನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಆಲೆಟ್ಟಿ ಬಿಜೆಪಿ ವತಿಯಿಂದ ಆಲೆಟ್ಟಿಯಲ್ಲಿ ಸಂಭ್ರಮಾಚರಣೆಯನ್ನು 6:00 ಗಂಟೆಗೆ ನಡೆಸಲು ನಿರ್ಧರಿಸಲಾಗಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕು ಎಂದು ಆಲೆಟ್ಟಿ ಬಿಜೆಪಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.