ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರರವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಬಾಳಿಲ – ಮುಪ್ಪೇರ್ಯ ಬಿಜೆಪಿ ಕಾರ್ಯಕರ್ತರು ಬಾಳಿಲದಲ್ಲಿ ಸಂಭ್ರಮಾಚರಣೆ ನಡೆಸಿದರು.
ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.