Ad Widget

ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಪ್ರಕ್ರಿಯೆಯನ್ನು ಸುಳ್ಯದಲ್ಲಿ ನಡೆಸುವಂತೆ ತಹಶೀಲ್ದಾರರಿಗೆ ಬ್ಲಾಕ್ ಕಾಂಗ್ರೆಸ್ ಮನವಿ

ಗ್ರಾಮ ಪಂಚಾಯತ್ ಚುನಾವಣೆ 2020 ರ ಅಧ್ಯಕ್ಷ ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿಯನ್ನು ನಿಗದಿಪಡಿಸುವ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಜ.23 ರಂದು ಜಿಲ್ಲಾ ಪಂಚಾಯಿತಿಯ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಿದ್ದಾರೆ. ಈ ಮೀಸಲಾತಿ ಪ್ರಕ್ರಿಯೆಯನ್ನು ಆಯಾಯ ತಾಲೂಕು ಹಾಗೂ ಸುಳ್ಯ ತಾಲೂಕಿನ ಮೀಸಲಾತಿ ಪ್ರಕ್ರಿಯೆಯನ್ನು ಸುಳ್ಯದಲ್ಲಿ ನಡೆಸುವಂತೆ ಕಾಂಗ್ರೆಸ್ ಬ್ಲಾಕ್ ಸಮಿತಿಯ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಯವರ ನೇತೃತ್ವದಲ್ಲಿ ಸುಳ್ಯ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಸಿಸಿ ಸದಸ್ಯ ಪಿಎಸ್ ಗಂಗಾಧರ್, ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಚೂಂತಾರು, ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಶಶಿಧರ ಎಂ ಜೆ, ಮಾಜಿ ನಗರ ಪಂಚಾಯತ್ ಸದಸ್ಯರಾದ ಮುಸ್ತಫಾ ಕೆ ಎಂ, ಮಾಜಿ ನಗರ ನಗರ ಕಾಂಗ್ರೆಸ್ ಅಧ್ಯಕ್ಷರಾದ ದಿನೇಶ್ ಅಂಬೆಕಲ್ಲು, ಬ್ಲಾಕ್ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading