
ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಜಲಾನಯನ ಅಭಿವೃದ್ಧಿ ಯೋಜನೆಯ ಮೂಲಕ ಬರಗಾಲ ತಡೆಯುವಿಕೆ ಬಗ್ಗೆ ಅರಿವು ಮೂಡಿಸುವ ಗ್ರಾಮಸಭೆ ಜ.18 ರಂದು ಅಜ್ಜಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚನಿಯ ಕಲ್ಲಡ್ಕ, ಗ್ರಾಮ ಪಂಚಾಯಿತ್ ಆಡಳಿತ ಅಧಿಕಾರಿ ಲಕ್ಷ್ಮೀಶ ರೈ, ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಶೀಲ, ಜಲಾನಯನ ತಂಡದ ನಾಯಕರಾದ ಈಶ್ವರಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಗೊಂಡ ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಪ್ರಗತಿಪರ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮೋಹನರವರು ಸ್ವಾಗತಿಸಿ, ಈಶ್ವರಪ್ಪ ವಂದಿಸಿದರು.