ಕರ್ನಾಟಕ ರಾಜ್ಯ ಸರಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶಾಸಕರಾದ ಅಂಗಾರ ರವರನ್ನು ಜ.18ರಂದು ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ಭೇಟಿ ಮಾಡಿದ ಸುಳ್ಯ ತಾಲೂಕು ಅಲ್ಪಸಂಖ್ಯಾತರ ಸಹಕಾರಿ ಸಂಘದ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರಾದ ಆರ್. ಕೆ. ಮಹಮ್ಮದ್, ಮಾಜಿ ಉಪಾಧ್ಯಕ್ಷರು ಹಾಲಿ ನಿರ್ದೇಶಕರಾದ ಹಸೈನಾರ್ ಕಲ್ಲುಗುಂಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಜನಾಬ್ ಅಬ್ದುಲ್ ಅಜಿಮ್ ರವರು ಹಾಗೂ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ರವರು ಉಪಸ್ಥಿತರಿದ್ದರು.
- Thursday
- November 21st, 2024