ಹರಿಹರಪಲ್ಲತ್ತಡ್ಕ ಗ್ರಾಮದ ಗುಂಡಿಹಿತ್ಲು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮತ್ತು ಸಪರಿವಾರ ದೈವಗಳ ಗುಡಿಗಳು ನವೀಕರಣಗೊಂಡಿದ್ದು ಜ. 24 ಆದಿತ್ಯವಾರದಿಂದ ಜ. 26 ಮಂಗಳವಾರದ ತನಕ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಸಪರಿವಾರ ದೈವಗಳ ನೇಮೋತ್ಸವ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿರುವುದು.
ಜ 24 ನೇ ಆದಿತ್ಯವಾರದಂದು ಬೆಳಿಗ್ಗೆ 10-00 ಗಂಟೆಯಿಂದ ಹಸಿರು ಕಾಣಿಕೆ ಸಮರ್ಪಣೆಯಾಗಲಿದೆ. ಸಂಜೆ 5-00 ಗಂಟೆಗೆ ತಂತ್ರಿಗಳ ಆಗಮನ ಹಾಗೂ ಪೂರ್ಣಕುಂಭ ಸ್ವಾಗತ ನಡೆಯಲಿದೆ. ಸಂಜೆ ಗಂಟೆ 7:00 ರಿಂದ ಪುಣ್ಯಾಹವಾಚನ, ಸ್ಥಳ ಶುದ್ದಿ, ಪ್ರಾಸಾದಶುದ್ದಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಂತ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ 6:00 ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಜ. 25 ಸೋಮವಾರದಂದು
ಬೆಳಿಗ್ಗೆ 6:30 ರಿಂದ ಗಣಪತಿಹೋಮ, ಬ್ರಹ್ಮಕಲಶ ಪೂಜೆ ನಡೆಯಲಿದೆ. ಬೆಳಿಗ್ಗೆ 9:53 ರಿಂದ 11:30ರ ಮೀನ ಲಗ್ನದ ಸುಮೂರ್ತದಲ್ಲಿ ಶ್ರೀ ದೇವರ ಪ್ರತಿಷ್ಠೆ, ಸಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ನಿತ್ಯನೈಮಿತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ಜರುಗಲಿದೆ. ಸಂಜೆ ಗಂಟೆ 6:00 ರಿಂದ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 7:00 ರಿಂದ ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಲಿದೆ. ಜ. 26 ಮಂಗಳವಾರದಂದು ಬೆಳಿಗ್ಗೆ ಗಂಟೆ 5:00 ರಿಂದ ಪಂಜುರ್ಲಿ ಹಾಗೂ ಚಾಮುಂಡಿ ದೈವಗಳ ನೇಮೋತ್ಸವ, ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ.
ವರದಿ:-✍ಉಲ್ಲಾಸ್ ಕಜ್ಜೋಡಿ