Ad Widget

ಬೆಳ್ಳಾರೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ – ಸನ್ಮಾನ

ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಜ.26 ರಂದು ಆಚರಿಸಲಾಯಿತು. ಧ್ವಜಾರೋಹಣವನ್ನು ಪ್ರಾಂಶುಪಾಲರಾದ ಹಸೀನಾಬಾನು ರವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯಲ್ಲಿ ಕಳೆದ ಹತ್ತು ವರ್ಷದಿಂದ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ , ಇದೀಗ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿಹೊಂದಿ ಸುಳ್ಯ ಅಕ್ಷರದಾಸೋಹ ಕಛೇರಿಗೆ ತೆರಳಿರುವ ಶೋಭಾಶ್ರೀ ಅವರನ್ನು...

ಅಜ್ಜಾವರ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯಲ್ಲಿ 72 ನೇ ಗಣರಾಜ್ಯೋತ್ಸವವನ್ನು ಜ.26 ರಂದು ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಸುಂದರ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ನಂತರ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವಾಯುಸೇನೆಯ ನಿವೃತ್ತ ಸೈನಿಕರು, ಕೊಡುಗೈ ದಾನಿಗಳು, ಶಿಕ್ಷಣ ಪ್ರೇಮಿ, ಎಪಿಎಂಸಿ ಮಾಜಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಮುಖ್ಯ ಅತಿಥಿಗಳಾಗಿ...
Ad Widget

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಭೆ – 5ನೇ ಬಾರಿಗೆ ಜಯಗಳಿಸಿದ ಜಿ.ಕೆ.ಹಮೀದ್ ಗೆ ಸಮ್ಮಾನ

ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಸಭೆಯು ಮಂಗಳೂರಿನ ಜನತ ಹೋಟೆಲ್ ನಲ್ಲಿ ನಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು ಅತಿಥಿಗಳಾಗಿ ಶಾಸಕರಾದ ಯು.ಟಿ.ಖಾದರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ , ಎನ್ ಎಸ್ ಯು ಐ ಅಧ್ಯಕ್ಷರಾದ ಸವಾದ್ ಸುಳ್ಯ, ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಕಾರ್ಯದರ್ಶಿ ಟಿ....

ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ಎಸ್‌.ಐ. ಆಗಿ ಪ್ರದೀಪ್ ಕೊಲ್ಯ

ಪಿ.ಎಸ್.ಐ. ನೇರ ನೇಮಕಾತಿಯಲ್ಲಿ ಆಯ್ಕೆಗೊಂಡು ತರಬೇತಿ ಮುಗಿಸಿರುವ ನಾಲ್ಕೂರು ಗ್ರಾಮದ ಪ್ರದೀಪ್ ಗೌಡ ಕೊಲ್ಯ ಬೆಂಗಳೂರು ದಕ್ಷಿಣದ ಜೆ.ಪಿ.ನಗರ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ಎಸ್.ಐ. ಆಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.2008 ರಲ್ಲಿ ಪೊಲೀಸ್ ಇಲಾಖೆಗೆ ಸೇವೆಗೆ ಸೇರಿ 2014 ರ ತನಕ ಮಂಗಳೂರಿನ ಬಂದರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಮಂಗಳೂರಿನ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿದ್ದರು. 2019...

ಸಚಿವ ಅಂಗಾರರಿಂದ ಉಡುಪಿ ಜಿಲ್ಲಾ ಪ್ರವಾಸ – ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಅಂಗಾರರು ನೂತನ ಸಚಿವರಾದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಅದ್ದೂರಿ ಹುಟ್ಟೂರ ಸನ್ಮಾನ ಕಾರ್ಯಕ್ರಮ ಜ.25 ರಂದು ಹಮ್ಮಿಕೊಳ್ಳಲಾಗಿತ್ತು. ಜಾತಿ ಧರ್ಮ ಪಕ್ಷ ಭೇದ ಮರೆತು ಎಲ್ಲರೂ ಮಾಡಿದ ಸನ್ಮಾನ ಸ್ವೀಕರಿಸಿ ಅಂದು ರಾತ್ರಿ ಉಡುಪಿ ಪ್ರವಾಸ ಕೈಗೊಂಡಿದ್ದರು. ಜ. 26 ರಂದು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಗಣರಾಜ್ಯೋತ್ಸವ...

ಮಡಪ್ಪಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಸ.ಹಿ.ಪ್ರಾ. ಶಾಲೆ ಮಡಪ್ಪಾಡಿಯಲ್ಲಿ 72 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ನಾಗೇಶ ಕುಚ್ಚಾಲ ಧ್ವಜಾರೋಹಣಗೈದರು. ಗ್ರಾ.ಪಂ.ನ ಸದಸ್ಯರಾದ ಮಿತ್ರದೇವ ಮಡಪ್ಪಾಡಿ, ಎಚ್.ಬಿ.ಜಯರಾಮ ಹಾಡಿಕಲ್ಲು, ಗುಣವರ್ಧನ ಸಮಿತಿ ಸದಸ್ಯರಾದ ವಸಂತಿ ಕಡಪಳ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ನಾಗವೇಣಿ, ಪುಷ್ಪ, ನವ್ಯ, ಸುದಿನ, ತನುರಾಜ್, ಅಂಗನವಾಡಿ ಕಾರ್ಯಕರ್ತೆ ವಿಮಲ, ವಿದ್ಯಾರ್ಥಿ ವೃಂದ, ಶಿಕ್ಷಕ ವೃಂದ ಹಾಗೂ...

ಸಚಿವ ಎಸ್. ಅಂಗಾರ ಉಡುಪಿ ಶ್ರೀಕೃಷ್ಣ ಮಠ ಭೇಟಿ

ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರರು ಉಡುಪಿಯಲ್ಲಿ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮ ದಲ್ಲಿ ಭಾಗವಹಿಸಿದ ಬಳಿಕ ಶಾಸಕ ಕೆ. ರಘುಪತಿ ಭಟ್ ರವರ ಜತೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣನ ದರ್ಶನ ಪಡೆದ ಸಚಿವರು ಬಳಿಕ ಪರ್ಯಾಯ ಅದಮಾರು ಮಠದ ಸ್ವಾಮಿಗಳಾದ ಶ್ರೀ ಶ್ರೀ ಈಶಪ್ರಿಯ ತೀರ್ಥ...

ಜ.27 : ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಸುಳ್ಯ ತಾಲೂಕು 25 ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆ. 19 ರಂದು ನಡೆಯಲಿದ್ದು, ಈ ಬಗ್ಗೆ ಜ. 27 ರಂದು ಅಪರಾಹ್ನ 3 ಗಂಟೆಗೆ ನೆಹರು ಸ್ಮಾರಕ ಮಹಾವಿದ್ಯಾಲಯದಲ್ಲಿ ಸಂಘ ಸಂಸ್ಥೆಗಳ ಹಾಗೂ ಸಾಹಿತ್ಯಾಸಕ್ತರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಸುಳ್ಯ ತಾಲೂಕು ಕ.ಸಾ.ಪ. ಅಧ್ಯಕ್ಷ ಹರಪ್ರಸಾದ್ ತುದಿಯಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ 72 ನೇ ಗಣರಾಜ್ಯೋತ್ಸವ – ತಹಶೀಲ್ದಾರ್ ಅನಿತಾಲಕ್ಷ್ಮಿ ಧ್ವಜಾರೋಹಣ

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ 72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸ‌ವ ಆಚರಣೆಯಲ್ಲಿ ತಹಶೀಲ್ದಾರ್ ಅನಿತಾಲಕ್ಷ್ಮಿ ಎಸ್.ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿದರು. ಬಳಿಕ ನಡೆದ ಸಮಾರಂಭದಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಎಪಿಎಂಸಿ...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಜ.26 ರಂದು ನಡೆಯಿತು. ಈ ಸಂದರ್ಭದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ., ಎನ್.ಎಸ್.ಎಸ್. ಯೋಜನಾಧಿಕಾರಿ ಡಾ.ಪ್ರಮೋದ್ ಪಿ.ಎ., ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!