
ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರರು ಉಡುಪಿಯಲ್ಲಿ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮ ದಲ್ಲಿ ಭಾಗವಹಿಸಿದ ಬಳಿಕ ಶಾಸಕ ಕೆ. ರಘುಪತಿ ಭಟ್ ರವರ ಜತೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣನ ದರ್ಶನ ಪಡೆದ ಸಚಿವರು ಬಳಿಕ ಪರ್ಯಾಯ ಅದಮಾರು ಮಠದ ಸ್ವಾಮಿಗಳಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.