ಈಶ್ವರಮಂಗಲದ ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಕೆ.ಅಬುಬಕರ್ ಹಾಜಿ ಯವರು ಧ್ವಜಾರೋಹಣವನ್ನು ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಡಾ.ಅಂಬೇಡ್ಕರ್ ರವರ ಸಂವಿಧಾನ ತತ್ವಗಳ ಮಹತ್ವವನ್ನು ವಿವರಿಸಿದರು.
ಸಲಹಾ ಸಮಿತಿಯ ಸದಸ್ಯರಾದ ರಾಮ ಮೇನಾಲ ಮಾತನಾಡಿ ಡಾ.ಅಂಬೇಡ್ಕರ್ ರವರು ಜಾರಿಗೆ ತಂದ ಈ ನೈಜ ಸ್ವಾತಂತ್ರ್ಯವನ್ನು ಪ್ರತಿಯೊಬ್ಬರೂ ಉಳಿಸಿಕೊಂಡಾಗ ಮಾತ್ರ ನಮ್ಮ ದೇಶ ಜಾತ್ಯಾತೀತ ತತ್ವದಡಿ ಉಳಿಯಲು ಸಾಧ್ಯ ಎಂಬ ಸಂದೇಶವನ್ನು ನೀಡಿದರು.
ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಹಾಜಿ ಮೇನಾಲ, ಸಲಹಾ ಸಮಿತಿಯ ಸದಸ್ಯರುಗಳಾದ ಇ.ಎ ಮಹಮ್ಮದ್ ಕುಂಞಿ,ಗಿರೀಶ್ ಮರಕ್ಕಡ, ಸಂಸ್ಥೆಯ ವ್ಯವಸ್ಥಾಪಕರಾದ ನಝೀರ್ ಅಹಮ್ಮದ್, ಪಿಯುಸಿ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ರಮ್ಲತ್.ಕೆ ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಶ್ರೀ ಪ್ರಿಯಾ, ಸ್ಮಿತಾ ರೈ, ಹಾಗೂ ಶಿಕ್ಷಕೇತರ ವೃಂದದವರಾದ ಹನ್ನತ್,ರೈಹಾನ,ಇಬ್ರಾಹಿಂ ಬಡಗನ್ನೂರ್,ಸುಶೀಲ ಸಹಕರಿಸಿದರು.
ಪಿಯುಸಿ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ರಮ್ಲತ್.ಕೆ ಸ್ವಾಗತಿಸಿ, ಶಿಕ್ಷಕಿ ಸ್ಮಿತಾ ರೈ ವಂದಿಸಿದರು.