- Thursday
- November 21st, 2024
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ‘ಅಯ್ಯನಕಟ್ಟೆ ಜಾತ್ರೆ’ ಜ.26ರಿಂದ 29ರವರೆಗೆ ನಡೆಯಲಿದ್ದು, ಜ. 26 ರಂದು ಆರಂಭಗೊಂಡಿತು.ಜ. 26ರಂದು ಬೆಳಗ್ಗೆ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನಿಧ್ಯದಲ್ಲಿ ವಿಶೇಷ ತಂಬಿಲ ಸೇವೆ ಹಾಗೂ ನಾಗತಂಬಿಲ ನೆರವೇರಿತು. ಮೂರುಕಲ್ಲಡ್ಕದಲ್ಲಿ ಸರ್ಪಸಂಸ್ಕಾರ ಹಾಗೂ ನಾಗತಂಬಿಲ ನೆರವೇರಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಜ. 27...
ಸುಳ್ಯ ಸರಕಾರಿ ಪದವಿ ಕಾಲೇಜಿನಲ್ಲಿ ಇಂದು 72 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲ ಡಾ. ಅಚ್ಚುತ ಪೂಜಾರಿ ಧ್ವಜಾರೋಹಣಗೈದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈಶ್ವರಮಂಗಲದ ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಕೆ.ಅಬುಬಕರ್ ಹಾಜಿ ಯವರು ಧ್ವಜಾರೋಹಣವನ್ನು ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಡಾ.ಅಂಬೇಡ್ಕರ್ ರವರ ಸಂವಿಧಾನ ತತ್ವಗಳ ಮಹತ್ವವನ್ನು ವಿವರಿಸಿದರು. ಸಲಹಾ ಸಮಿತಿಯ ಸದಸ್ಯರಾದ ರಾಮ ಮೇನಾಲ ಮಾತನಾಡಿ ಡಾ.ಅಂಬೇಡ್ಕರ್ ರವರು ಜಾರಿಗೆ ತಂದ ಈ ನೈಜ ಸ್ವಾತಂತ್ರ್ಯವನ್ನು...
ಅಚ್ರಪ್ಪಾಡಿ ಶಾಲೆಯಲ್ಲಿ 72ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಶಾಲೆಯ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ ಇವರು ಮೊದಲಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರಿಂದ ರಚಿತವಾದ ಸಂವಿಧಾನದಲ್ಲಿ ನಮ್ಮ ಬದುಕು ಅದರಿಂದ ಸಂವಿಧಾನ ಶಿಲ್ಪಿಯ ಸ್ಮರಣೆ ಮುಖ್ಯವಾಗಿದೆ ಎಂದು ಸಂವಿಧಾನದ ಕುರಿತಾಗಿ ಮಾತನಾಡಿ ಶುಭಕೋರಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿದರು. ಶಾಲಾ ಅಭಿವೃದ್ಧಿ ಸಮಿತಿ...
ಪಂಜ ಗ್ರಾಮ ಪಂಚಾಯತ್ ನಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಪಂಚಾಯತು ಅಭಿವೃದ್ಧಿ ಅಧಿಕಾರಿ ಮಣಿಯಾನ ಪುರುಷೋತ್ತಮ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಗ್ರಾ.ಪಂ. ಸಿಬ್ಬಂದಿ ಶ್ರೀ ಬಾಬು ಇವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸಿಬ್ಬಂದಿಗಳು ಹಾಗೂ ಉದ್ಯಮಿ ವೆಂಕಟ್ರಮಣ ಭಟ್ ಇವರು ಉಪಸ್ಥಿತರಿದ್ದರು.
ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು 72 ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸದಸ್ಯೆ ಪ್ರಮೀಳಾ ಎರ್ದಡ್ಕ ಧ್ವಜಾರೋಹಣ ನೇರವೇರಿಸಿದರು. ಎಸ್.ಡಿ.ಎಂ.ಸಿ ಸದಸ್ಯರಾದ ಲೋಕೇಶ್ವರ ಡಿ.ಆರ್ ಶುಭಹಾರೈಸಿದರು, ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು,ಶಾಲಾ ಮುಖ್ಯೋಪಾಧ್ಯಾಯರು, ಶಾಲೆ ಮತ್ತು ಕಾಲೇಜು ಸಿಬ್ಬಂದಿ ವರ್ಗ, ಎಸ್.ಡಿ.ಎಂ.ಸಿ. ಸದಸ್ಯರು...
ಜ.25 ರಂದು ನಡೆದ ಹುಟ್ಟೂರ ಸನ್ಮಾನ ಕಾರ್ಯಕ್ರಮದಲ್ಲಿ ಬಂದರು ಮೀನುಗಾರಿಕಾ, ಒಳನಾಡು ಜಲಸಾರಿಗೆ ಸಚಿವ ಅಂಗಾರರಿಗೆ ಸುುಳ್ಯ ತಾಲೂಕು ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಬಾಳಿಲ ಗ್ರಾಮ ಪಂಚಾಯತಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಈ ಪ್ರಯುಕ್ತ ಆಡಳಿತಾಧಿಕಾರಿ ಶ್ರೀ ನಿರಂಜನ್ ಚಿದಾನಂದ್ ಹಿರೇಮಠ್ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತ್ರಿವೇಣಿ ಹಾಗೂ ಶ್ರೀಮತಿ ಸುಶೀಲಾ, ಪಂಚಾಯತ್ ಕಾರ್ಯದರ್ಶಿಗಳಾದ ಶ್ರೀ ಜಯಶೀಲ ರೈ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಚಂದ್ರಾವತಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 72ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ರಾಮ್ ಭಟ್ ಧ್ವಜಾರೋಹಣ ನೆರವೇರಿಸಿದರು. ಶುಭಾ.ಡಿ ಗಣರಾಜ್ಯೋತ್ಸವ ಭಾಷಣಗೈದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸುಬ್ಬಯ್ಯ ವೈ ಬಿ ಸ್ವಾಗತಿಸಿ, ಶಿಕ್ಷಕ ಶಿವಪ್ರಸಾದ್ ಜಿ ನಿರೂಪಿಸಿದರು. ಈ ವೇಳೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಭುವನೇಶ್ವರ್, ಶಾಲೆಯ ಶಿಕ್ಷಕ ವೃಂದದವರು, ಅಂಗನವಾಡಿ...
ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 72ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ...
Loading posts...
All posts loaded
No more posts