- Thursday
- November 21st, 2024
ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 72ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ನೆಟ್ಟಾರು ವೆಂಕಟ್ರಮಣ ಭಟ್ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಖಾತೆಯ ನೂತನ ಸಚಿವ ಎಸ್. ಅಂಗಾರ ಅವರು ಉಡುಪಿಯ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜ.26ರಂದು ಧ್ವಜಾರೋಹಣ ನೆರವೇರಿಸಿದರು.ಬಳಿಕ 72ನೇ ಗಣರಾಜ್ಯೋತ್ಸವದ ಪ್ರಯುಕ್ತ ಶುಭಹಾರೈಸಿದರಲ್ಲದೆ ಹುತಾತ್ಮ ಸೈನಿಕರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ...
ಸುಳ್ಯ ಮೆಸ್ಕಾಂನಲ್ಲಿ 72ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜರೋಹಣ ಕಾರ್ಯಕ್ರಮ ಇಂದು ನಡೆಯಿತು. ಜೆ.ಇ.ಬೋರಯ್ಯ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಜೆ.ಇ.ಸುರೇಶ್ ಭಟ್, ಪ್ರಭಾರ ಜೆಇ ಜಯಪ್ರಕಾಶ್ ಕೆ. ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀ ಶಾರದಾ ಮಹಿಳಾ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ಇವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಪೆರುವಾಜೆ ಗ್ರಾಮದ ಮುಕ್ಕೂರು ಬಿರುಸಾಗು ನಿವಾಸಿ ಮಾಧವಿ ರೈ ಯವರು ಮನೆಯ ಮೇಲ್ಛಾವಣಿ ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿದ್ದು, ಅಪಾಯವನ್ನು ಆಹ್ವಾನಿಸುವಂತಿತ್ತು. ಈ ವಿಷಯ ಮನಗಂಡ ಯುವಸೇನೆ ಮುಕ್ಕೂರು ಪೆರುವಾಜೆಯ ಸದಸ್ಯರು ಬೀಳುವ ಸ್ಥಿತಿಯಲ್ಲಿದ್ದ ಮನೆಯ ದುರಸ್ತಿ ಕಾರ್ಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕ್ಯಾನ್ಸರ್ ನಿಂದ ಕೆಲವು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಮಾಧವಿ ರೈ ಯವರು...