ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ
ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ‘ಅಯ್ಯನಕಟ್ಟೆ ಜಾತ್ರೆ’ ಜ. 26 ರಂದು ಆರಂಭಗೊಂಡಿದ್ದು ಜ. 29 ರಂದು ಸಂಪನ್ನಗೊಂಡಿತು.
ಜ. 29ರಂದು ಬೆಳಗ್ಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವ, ಕಳಂಜ ಗುತ್ತಿನಿಂದ ಧೂಮಾವತಿ ದೈವ ಹಾಗೂ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಟು, ಕಳಂಜ ಕಲ್ಲಮಾಡದ ಬಳಿ ಶಿರಾಡಿ , ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡಾವಳಿ ನಡೆಯಿತು. ಮಧ್ಯಾಹ್ನ ಪ್ರಸಾದ ವಿತರಣೆ , ಅನ್ನಸಂತರ್ಪಣೆ ನಡೆಯಿತು.
ಸಂಜೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ ಹಾಗೂ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡುವುದರೊಂದಿಗೆ ಜಾತ್ರೋತ್ಸವ ಸಂಪನ್ನಗೊಂಡಿತು.
ಜಾತ್ರೋತ್ಸವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಊರ ಹಾಗೂ ಪರವೂರಿನ ಭಕ್ತರು ಕಣ್ತುಂಬಿಕೊಂಡರು.