Ad Widget

ಹರಿಹರ ಪಲ್ಲತ್ತಡ್ಕ : ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ

ಹರಿಹರ ಪಲ್ಲತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಇಂದು ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆಯವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ ಅಂಗಣ, ಆಶಾ ಕಾರ್ಯಕರ್ತೆ ಪುಷ್ಪಾವತಿ, ಗ್ರಂಥಾಲಯ ಮೇಲ್ವಿಚಾರಕಿ ಚಂದ್ರಿಕಾ ಹಾಗೂ ಅಂಗನವಾಡಿ ಕಾರ್ಯಕರ್ತೆಯಾದ ಹರಿಣಿಯವರು ಉಪಸ್ಥಿತರಿದ್ದರು.

✍ವರದಿ:-ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!