- Thursday
- November 21st, 2024
ಪಿ.ಎಸ್.ಐ. ನೇರ ನೇಮಕಾತಿಯಲ್ಲಿ ಆಯ್ಕೆಗೊಂಡು ತರಬೇತಿ ಮುಗಿಸಿರುವ ನಾಲ್ಕೂರು ಗ್ರಾಮದ ಪ್ರದೀಪ್ ಗೌಡ ಕೊಲ್ಯ ಬೆಂಗಳೂರು ದಕ್ಷಿಣದ ಜೆ.ಪಿ.ನಗರ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ಎಸ್.ಐ. ಆಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.2008 ರಲ್ಲಿ ಪೊಲೀಸ್ ಇಲಾಖೆಗೆ ಸೇವೆಗೆ ಸೇರಿ 2014 ರ ತನಕ ಮಂಗಳೂರಿನ ಬಂದರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಮಂಗಳೂರಿನ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿದ್ದರು. 2019...
ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಅಂಗಾರರು ನೂತನ ಸಚಿವರಾದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಅದ್ದೂರಿ ಹುಟ್ಟೂರ ಸನ್ಮಾನ ಕಾರ್ಯಕ್ರಮ ಜ.25 ರಂದು ಹಮ್ಮಿಕೊಳ್ಳಲಾಗಿತ್ತು. ಜಾತಿ ಧರ್ಮ ಪಕ್ಷ ಭೇದ ಮರೆತು ಎಲ್ಲರೂ ಮಾಡಿದ ಸನ್ಮಾನ ಸ್ವೀಕರಿಸಿ ಅಂದು ರಾತ್ರಿ ಉಡುಪಿ ಪ್ರವಾಸ ಕೈಗೊಂಡಿದ್ದರು. ಜ. 26 ರಂದು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಗಣರಾಜ್ಯೋತ್ಸವ...
ಸ.ಹಿ.ಪ್ರಾ. ಶಾಲೆ ಮಡಪ್ಪಾಡಿಯಲ್ಲಿ 72 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ನಾಗೇಶ ಕುಚ್ಚಾಲ ಧ್ವಜಾರೋಹಣಗೈದರು. ಗ್ರಾ.ಪಂ.ನ ಸದಸ್ಯರಾದ ಮಿತ್ರದೇವ ಮಡಪ್ಪಾಡಿ, ಎಚ್.ಬಿ.ಜಯರಾಮ ಹಾಡಿಕಲ್ಲು, ಗುಣವರ್ಧನ ಸಮಿತಿ ಸದಸ್ಯರಾದ ವಸಂತಿ ಕಡಪಳ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ನಾಗವೇಣಿ, ಪುಷ್ಪ, ನವ್ಯ, ಸುದಿನ, ತನುರಾಜ್, ಅಂಗನವಾಡಿ ಕಾರ್ಯಕರ್ತೆ ವಿಮಲ, ವಿದ್ಯಾರ್ಥಿ ವೃಂದ, ಶಿಕ್ಷಕ ವೃಂದ ಹಾಗೂ...
ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರರು ಉಡುಪಿಯಲ್ಲಿ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮ ದಲ್ಲಿ ಭಾಗವಹಿಸಿದ ಬಳಿಕ ಶಾಸಕ ಕೆ. ರಘುಪತಿ ಭಟ್ ರವರ ಜತೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣನ ದರ್ಶನ ಪಡೆದ ಸಚಿವರು ಬಳಿಕ ಪರ್ಯಾಯ ಅದಮಾರು ಮಠದ ಸ್ವಾಮಿಗಳಾದ ಶ್ರೀ ಶ್ರೀ ಈಶಪ್ರಿಯ ತೀರ್ಥ...
ಸುಳ್ಯ ತಾಲೂಕು 25 ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆ. 19 ರಂದು ನಡೆಯಲಿದ್ದು, ಈ ಬಗ್ಗೆ ಜ. 27 ರಂದು ಅಪರಾಹ್ನ 3 ಗಂಟೆಗೆ ನೆಹರು ಸ್ಮಾರಕ ಮಹಾವಿದ್ಯಾಲಯದಲ್ಲಿ ಸಂಘ ಸಂಸ್ಥೆಗಳ ಹಾಗೂ ಸಾಹಿತ್ಯಾಸಕ್ತರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಸುಳ್ಯ ತಾಲೂಕು ಕ.ಸಾ.ಪ. ಅಧ್ಯಕ್ಷ ಹರಪ್ರಸಾದ್ ತುದಿಯಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ 72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯಲ್ಲಿ ತಹಶೀಲ್ದಾರ್ ಅನಿತಾಲಕ್ಷ್ಮಿ ಎಸ್.ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿದರು. ಬಳಿಕ ನಡೆದ ಸಮಾರಂಭದಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಎಪಿಎಂಸಿ...
ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಜ.26 ರಂದು ನಡೆಯಿತು. ಈ ಸಂದರ್ಭದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ., ಎನ್.ಎಸ್.ಎಸ್. ಯೋಜನಾಧಿಕಾರಿ ಡಾ.ಪ್ರಮೋದ್ ಪಿ.ಎ., ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ‘ಅಯ್ಯನಕಟ್ಟೆ ಜಾತ್ರೆ’ ಜ.26ರಿಂದ 29ರವರೆಗೆ ನಡೆಯಲಿದ್ದು, ಜ. 26 ರಂದು ಆರಂಭಗೊಂಡಿತು.ಜ. 26ರಂದು ಬೆಳಗ್ಗೆ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನಿಧ್ಯದಲ್ಲಿ ವಿಶೇಷ ತಂಬಿಲ ಸೇವೆ ಹಾಗೂ ನಾಗತಂಬಿಲ ನೆರವೇರಿತು. ಮೂರುಕಲ್ಲಡ್ಕದಲ್ಲಿ ಸರ್ಪಸಂಸ್ಕಾರ ಹಾಗೂ ನಾಗತಂಬಿಲ ನೆರವೇರಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಜ. 27...
ಸುಳ್ಯ ಸರಕಾರಿ ಪದವಿ ಕಾಲೇಜಿನಲ್ಲಿ ಇಂದು 72 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲ ಡಾ. ಅಚ್ಚುತ ಪೂಜಾರಿ ಧ್ವಜಾರೋಹಣಗೈದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈಶ್ವರಮಂಗಲದ ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಕೆ.ಅಬುಬಕರ್ ಹಾಜಿ ಯವರು ಧ್ವಜಾರೋಹಣವನ್ನು ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಡಾ.ಅಂಬೇಡ್ಕರ್ ರವರ ಸಂವಿಧಾನ ತತ್ವಗಳ ಮಹತ್ವವನ್ನು ವಿವರಿಸಿದರು. ಸಲಹಾ ಸಮಿತಿಯ ಸದಸ್ಯರಾದ ರಾಮ ಮೇನಾಲ ಮಾತನಾಡಿ ಡಾ.ಅಂಬೇಡ್ಕರ್ ರವರು ಜಾರಿಗೆ ತಂದ ಈ ನೈಜ ಸ್ವಾತಂತ್ರ್ಯವನ್ನು...
Loading posts...
All posts loaded
No more posts