Ad Widget

ಎನ್.ಎಂ.ಸಿ.ಯಲ್ಲಿ ವಿದ್ಯಾರ್ಥಿಗಳಿಗೆ ಪ್ರೇಶರ್ಸ್ ಡೇ ಕಾರ್ಯಕ್ರಮ

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪ್ರೆಶರ್ಸ್ ಡೇ ಜ.26 ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ರುದ್ರಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ಸಂದೇಶ್ ರೈ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳು ಮಾತನಾಡಿ ವಿದ್ಯಾರ್ಥಿಗಳಿಗೆ ಶುಭಕೋರಿ ಬರಮಾಡಿಕೊಂಡರು. ಹಾಗೂ ವೇದಿಕೆಯಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ರಮ್ಯ ಎಸ್ ಕೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಮಾಜ ಕಾರ್ಯವಿಭಾಗದ ಉಪನ್ಯಾಸಕರು ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದ್ವಿತೀಯ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪವನ್ ಸ್ವಾಗತಿಸಿ, ದ್ವಿತೀಯ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ಶಶಿಕಲಾ ಜಿ ವಂದಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿವ್ಯರಾಜ್ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!