
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಜ.30 ರಂದು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೆವಿಜಿ ಮೆಡಿಕಲ್ ಕಾಲೇಜಿನ ಕಮ್ಯುನಿಟಿ ಮೆಡಿಸಿನ್ ವಿಭಾಗದ ಪ್ರಾಧ್ಯಾಪಕಿ ಡಾ. ಕೃತಿ ಭಟ್ ಇವರು “ಮಕ್ಕಳ ರಕ್ಷಣೆ ಆರೋಗ್ಯದ ದೃಷ್ಟಿಕೋನದಲ್ಲಿ ” ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ದಿನೇಶ್ ಕುಮಾರ್ ಎ ವಹಿಸಿದರು. ಕಾರ್ಯಕ್ರಮದ ಸಂಯೋಜಕರು ಹಾಗೂ ಸಹಾಯಕ ಪ್ರಾಧ್ಯಾಪಕ ಅಬ್ದುಲ್ ರಶೀದ್ ಕೆ ಎಮ್ ಹಾಗೂ ಸಹ ಪ್ರಾಧ್ಯಾಪಕಿ ಕುಮಾರಿ ಅರ್ಪಿತಾ ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಥಮ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅರ್ಚನಾ ಪಿ ಸ್ವಾಗತಿಸಿ, ಗಣೇಶ್ ಕೆ ಅತಿಥಿಗಳನ್ನು ಪರಿಚಯಿಸಿದರು. ಮೇಘಶ್ರೀ ಕೆ ಆರ್ ವಂದಿಸಿ ಹಾಗೂ ಸೋನಾ ಟೋಮಿ ಕಾರ್ಯಕ್ರಮ ನಿರೂಪಿಸಿದರು.