Ad Widget

ನಾಯಿಯನ್ನು ಅಟ್ಟಿಸಿಕೊಂಡು ಶೌಚಾಲಯಕ್ಕೆ ನುಗ್ಗಿದ ಚಿರತೆ ಲಾಕ್ – ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡ ಚಿರತೆ

ಸಾಕು ನಾಯಿಯೊಂದನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ಸಾಕು ನಾಯಿಯ ಜೊತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ಬುಧವಾರ ಬೆಳಿಗ್ಗೆ ಕಡಬ ತಾಲೂಕಿನ ಕೈಕಂಬದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದೆ. ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕುನಾಯಿಯು ಮನೆಯ ಹೊರಗಿದ್ದ ಶೌಚಾಲಯಕ್ಕೆ ಹೊಕ್ಕಿದ್ದು, ಚಿರತೆಯು ನಾಯಿಯನ್ನು ಹಿಂಬಾಲಿಸಿ ಶೌಚಾಲಯದ ಒಳಗೆ ಬಂದಿದೆ. ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ ಶೌಚಾಲಯದ ಬಾಗಿಲನ್ನು ಹಾಕಿದ್ದು, ಇದೀಗ ನಾಯಿ ಮತ್ತು ಚಿರತೆ ಎರಡೂ ಶೌಚಾಲಯದ ಒಳಗೆ ಬಂಧಿಯಾಗಿದೆ.

. . . . . . . . .

ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡ ಚಿರತೆ
ಅರಣ್ಯ ಇಲಾಖೆಯವರು ಬಂದು ಚಿರತೆಯನ್ನು ಬಲೆ ಹಾಕಿ ಹಿಡಿಯುವ ವೇಳೆ ತಪ್ಪಿಸಿಕೊಂಡು ಕಾಡಿನತ್ತ ಪರಾರಿಯಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading