Ad Widget

ಕಳಂಜ ಗ್ರಾಮ ಪಂಚಾಯತಿನಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ

ಕಳಂಜ ಗ್ರಾಮ ಪಂಚಾಯತ್ ನ 2020-21ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ, ಪೋಷಣ ಅಭಿಯಾನ ಮಾಸಾಚರಣೆಯಡಿಯಲ್ಲಿ ಸುಪೋಷಣ್ ದಿನಾಚರಣೆಯು ಫೆ.5 ರಂದು ಅಯ್ಯನಕಟ್ಟೆಯ ಪಂಡಿತ್ ದೀನ್ ದಯಾಳ್ ಸಮುದಾಯ ಭವನ ಇಲ್ಲಿ ನಡೆಯಿತು. ಮಕ್ಕಳ ಗ್ರಾಮಸಭೆಯ ಅಧ್ಯಕ್ಷತೆಯನ್ನು ಕೋಟೆಮುಂಡುಗಾರು ಶಾಲಾ ವಿದ್ಯಾರ್ಥಿ ಕು. ಅಶ್ವಿನಿ ಎಂ ಹೆಚ್ ವಹಿಸಿದ್ದರು. ಸದ್ರಿ ಗ್ರಾಮ ಸಭೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಗ್ರಾಮ ಪಂಚಾಯತ್ ವತಿಯಿಂದ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಯಿತು.

. . . . . . . . .

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಉಷಾ, ಸಿ ಆರ್ ಪಿ ಸವಿತಕುಮಾರಿ, ಕಿರಿಯ ಅರೋಗ್ಯ ಸಹಾಯಕಿ ಶ್ರೀಮತಿ ಬೇಬಿ ಕೆ ಸಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮಕ್ಕಳು, ಶಿಕ್ಷಕರು, ಸ್ವ- ಸಹಾಯ ಸಂಘಗಳ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ ಆರ್ ಸ್ವಾಗತಿಸಿ, ಕಾರ್ಯದರ್ಶಿ ಪದ್ಮಯ್ಯ ಕೆ ವಂದಿಸಿದರು. ಆ ಬಳಿಕ ಮಹಿಳೆಯರ ಗೊಂಚಲು ಸಭೆ ನಡೆಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading