ಮುಕ್ಕೂರು : ಕುಂಡಡ್ಕ- ಮುಕ್ಕೂರು ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಆಶ್ರಯದಲ್ಲಿ ಫೆ.13 ರಂದು ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನುಶಿವಳ್ಳಿ ಸಂಪನ್ನ ಬೆಳಂದೂರು ವಲಯ ಅಧ್ಯಕ್ಷ ಮೋಹನ ಬೈಪಡಿತ್ತಾಯ ಉದ್ಘಾಟಿಸಲಿದ್ದಾರೆ. ನೇಸರ ಯುವಕ ಮಂಡಲ ಗೌರವಾಧ್ಯಕ್ಷ ಹಾಗೂ ಗ್ರಾ.ಪಂ.ಸದಸ್ಯ ಜಗನ್ನಾಥ ಪೂಜಾರಿ ಮುಕ್ಕೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾ.ಪಂ.ಸದಸ್ಯರಾದ ಗುಲಾಬಿ ಬಿ ಬೊಮ್ಮೆಮಾರು, ಚಂದ್ರಾವತಿ ಇಟ್ರಾಡಿ, ಅಂಚೆ ನಿರೀಕ್ಷಕ ಸುದೀಪ್ ಕುಮಾರ್, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಪಾಲ್ತಾಡಿ ಗ್ರಾಮವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ, ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಪ್ರಸಾದ್ ಎನ್.ಕೆ., ಮುಕ್ಕೂರು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯತಕಂಡ ಉಪಸ್ಥಿತರಿರಲಿದ್ದಾರೆ.