Ad Widget

ಸುಳ್ಯ : ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ


ಸುಳ್ಯ ಮಂಡಲ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಅಧ್ಯಕ್ಷರಾದ ಶುಭದಾ ರೈ ಯವರ ಅಧ್ಯಕ್ಷತೆ ಯಲ್ಲಿ ಫೆ.10 ರಂದು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಧನಲಕ್ಷ್ಮೀ, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಭಾಗೀರಥಿ ಮುರುಳ್ಯ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ತ್ರಿವೇಣಿ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಭೋದ್ ಶೆಟ್ಟಿ, ರಾಕೇಶ್ ರೈ ಕೆಡೆಂಜಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯ ದರ್ಶಿಗಳಾದ ತೇಜಸ್ವಿನಿ ಕಟ್ಟಪುಣಿ, ಗೀತಾ ಶೇಖರ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಪುಷ್ಪಾವತಿ ಬಾಳಿಲ ಮತ್ತು ಮಹಿಳಾ ಮೋರ್ಚಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಿಂದ ಸುಳ್ಯ ಬಿಜೆಪಿ ಕಾರ್ಯಾಲಯಕ್ಕೆ ಟಿವಿ ಹಸ್ತಾಂತರಿಸಲಾಯಿತು. ತೇಜಸ್ವಿನಿ ಸ್ವಾಗತಿಸಿ, ಗೀತಾ ಶೇಖರ್ ವಂದಿಸಿದರು. ವಿನುತಾ ಪಾತಿಕಲ್ಲು ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!