ಮಡಪ್ಪಾಡಿ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಗುತ್ತಿಗಾರು ಇವುಗಳ ಜಂಟಿ ಆಶ್ರಯದಲ್ಲಿ ತರಬೇತಿ ಕಾರ್ಯಾಗಾರ ನಡೆಯಿತು.
ಈ ತರಬೇತಿ ಕಾರ್ಯಾಗಾರದ ಸಭಾಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ನಾಗೇಶ ಕುಚ್ಚಾಲ ವಹಿಸಿದ್ದರು. ತರಬೇತಿಯ ಉದ್ಘಾಟನೆಯನ್ನು ಗುತ್ತಿಗಾರು ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿ ಸಂತೋಷ್ ನೆರವೇರಿಸಿದರು. ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಪೆರ್ನಾಜೆ,ಸಂಪನ್ಮೂಲ ವ್ಯಕ್ತಿಗಳಾದ ಚಂದ್ರಶೇಖರ್, ಪ್ರಸಾದ್ ನಾಯ್ಕ, ಶಿಕ್ಷಕ ಜಗದೀಶ್ ಉಪಸ್ಥಿತರಿದ್ದರು.
ಈ ಕಾರ್ಯಗಾರದಲ್ಲಿ ಶಿಕ್ಷಣದ ಸಾರ್ವತ್ರೀಕರಣದ ಬಗ್ಗೆ ಅರಿವು ಶಾಲೆಯಲ್ಲಿ ಹಮ್ಮಿಕೊಳ್ಳಬಹುದಾದ ವಿವಿಧ ಕಾರ್ಯಕ್ರಮಗಳನ್ನು ಚರ್ಚಿಸಲಾಯಿತು. ಅಲ್ಲದೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನೀಡಬಹುದಾದ ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಬೆಳಕು ಚೆಲ್ಲಿದರು. ವಿದ್ಯಾರ್ಥಿಗಳಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮನವರಿಕೆ ಮಾಡಿದರು. ಅಲ್ಲದೆ ವಿಶೇಷ ಅಗತ್ಯತೆಯುಳ್ಳ ಮಕ್ಕಳ ಬಗ್ಗೆ ನಡೆಯುವ ಇಲಾಖಾ ಕಾರ್ಯಕ್ರಮಗಳು, ಸವಲತ್ತುಗಳನ್ನು ಪಡೆಯುವ ವಿಧಾನದ ಬಗ್ಗೆ ಮಾಹಿತಿ ನೀಡಿದರು. ಚಟುವಟಿಕೆಯ ಮೂಲಕ ಶಾಲಾ ಸುರಕ್ಷತೆ, ಮಕ್ಕಳ ವೈಯುಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ ಬಗ್ಗೆ, ಇಂದಿನ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಶಾಲಾ ಹಂತದಲ್ಲಿ ಸಮುದಾಯದ ಸಹಭಾಗಿತ್ವದೊಂದಿಗೆ ನಡೆಸಬಹುದಾದ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಶಿಬಿರಾರ್ಥಿಗಳ ವೈಯುಕ್ತಿಕ ಅಭಿಪ್ರಾಯ ಸಂಗ್ರಹಿಸಲಾಯಿತು. ಕಾರ್ಯಾಗಾರದಲ್ಲಿ ಶಾಲೆಯ ಎಲ್ಲಾ ಹದಿನೆಂಟು ಮಂದಿ ಪೋಷಕ ಸದಸ್ಯರು ಭಾಗವಹಿಸಿದ್ದರು. ಚಂದ್ರಶೇಖರ ಪಾರೆಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
- Friday
- November 22nd, 2024