Ad Widget

ಪೆರುವಾಜೆ : ಆಪರೇಷನ್ ಕಮಲದಿಂದ ಬಿಜೆಪಿಗೆ ಅಧಿಕಾರ – ಅಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಮುಕ್ಕೂರು, ಉಪಾಧ್ಯಕ್ಷರಾಗಿ ಚಂದ್ರಾವತಿ ಇಟ್ರಾಡಿ

ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಪೆರುವಾಜೆ ಯಲ್ಲಿ ಬಿಜೆಪಿಗೆ ಅಧಿಕಾರ ಲಭಿಸಿದೆ. ಅಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಅವಿರೋಧ ಆಯ್ಕೆಯಾಗಿದ್ದಾರೆ. ಇಲ್ಲಿ 8 ಸ್ಥಾನಗಳ ಪೈಕಿ ಕಾಂಗ್ರೆಸ್ 5 ಹಾಗೂ ಬಿಜೆಪಿ 3 ಸ್ಥಾನ ಪಡೆದಿತ್ತು. ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಅಧಿಕಾರ ನಡೆಸಲು ಬಹುಮತವಿದ್ದರೂ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದ ಕಾಂಗ್ರೆಸ್ ತನ್ನ ನೆಲೆ ಕಳೆದುಕೊಂಡಂತಾಗಿದೆ. ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದ ಜಗನ್ನಾಥ ಪೂಜಾರಿ, ಗುಲಾಬಿ, ಚಂದ್ರಾವತಿ ಬಿಜೆಪಿಗೆ ಸೇರ್ಪಡೆಯಾಗಿರುವುದರಿಂದ ಬಿಜೆಪಿ 6 ಸ್ಥಾನ ಪಡೆದುಕೊಂಡಂತಾಗಿದೆ. ಸಚಿನ್ ರಾಜ್ ಶೆಟ್ಟಿ ಮತ್ತು ಶಹನಾಜ್ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಮತಿ ಚಂದ್ರಾವತಿ ಇಟ್ರಾಡಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಸುನಿಲ್ ಕೇರ್ಪಳ, ಬೂಡು ರಾಧಾಕೃಷ್ಣ ರೈ ಸುನಿಲ್ ರೈ ಪೆರುವಾಜೆ, ಪದ್ಮನಾಭ ಶೆಟ್ಟಿ ಪೆರುವಾಜೆ ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!