
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದ ಬೆಳ್ಳಿ ಹಬ್ಬ ಆಚರಣೆಯ ಅಂಗವಾಗಿ ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ “ಸ್ಪಂದನ 2021” ಫೆ.20 ರಂದು ಕೆ.ವಿ.ಜಿ ಆಯುರ್ವೇದ ಕಾಲೇಜಿನ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ, ಶಾಸಕ ಡಾ.ವೈ.ಭರತ್ ಶೆಟ್ಟಿ ವಿಚಾರ ಸಂಕಿರಣ ವನ್ನು ಉದ್ಘಾಟಿಸಿದರು. ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಐಪಿಎಸ್ ಅಧಿಕಾರಿ ಡಾ.ಸುಮನ್ ಡಿ ಪನ್ನೇಕರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಸಿಂಡಿಕೇಟ್ ಸಮಿತಿ ಸದಸ್ಯ ಡಾ.ಕಿರಣ್ ಕುಮಾರ್, ಡಾ.ಆನಂದ್ ಕ್ರಿಶಾಲ್, ಡಾ.ಕೆ.ವಿ.ದಿಲೀಪ್ ಕುಮಾರ್,ಡಾ. ಐಶ್ವರ್ಯ ಕೆ.ಸಿ., ಡಾ. ಗೌತಮ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಯುರ್ವೇದ ವಿಷಯದಲ್ಲಿ ವಿಚಾರ ಸಂಕಿರಣ ಎರಡು ದಿನಗಳ ಕಾಲ ನಡೆಯಲಿದೆ. ದೇಶದ ವಿವಿಧ ವಿಶ್ವ ವಿದ್ಯಾನಿಲಯಗಳ ತಜ್ಞರು ವಿಚಾರ ಮಂಡಿಸಲಿದ್ದಾರೆ. ವಿವಿಧ ರಾಜ್ಯಗಳ ವಿವಿಗಳ ಸ್ನಾತಕೋತ್ತರ ವಿದ್ಯಾರ್ಥಿಗಳು, ತರಬೇತಿ ವೈದ್ಯರುಗಳು, ಉಪನ್ಯಾಸಕರು ಸೇರಿ 500 ಮಂದಿ ಭಾಗವಹಿಸಿದ್ದರು.
ಕೆ.ವಿ.ಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಹಾಗೂ ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಡಾ.ಲೀಲಾಧರ್ ಡಿ.ವಿ. ಸ್ವಾಗತಿಸಿದರು.