ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಕಾರ್ಯಕ್ರಮವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡಿದೆ. ಫೆ.20 ರಂದು ಬೆಳಗ್ಗೆಯಿಂದ ಹಸಿರುವಾಣಿ ಸಮರ್ಪಣೆ ನಡೆದು ಮದ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ತಂತ್ರಿಗಳ ಸ್ವಾಗತ ಕಾರ್ಯಕ್ರಮ, ಹಾಗೂ ರಾತ್ರಿ ಮಹಾಪೂಜೆ ಅನ್ನಸಂತರ್ಪಣೆ ನಡೆಯಿತು. ರಾತ್ರಿ 7:30 ರಿಂದ ವಿಠಲ ನಾಯಕ್ ಕಲ್ಲಡ್ಕ ಮತ್ತು ಬಳಗದ ವರಿಂದ ಗೀತ-ಸಾಹಿತ್ಯ-ಸಂಭ್ರಮ ಕಾರ್ಯಕ್ರಮ ನಡೆಯಿತು.
ಫೆ.21ಆದಿತ್ಯವಾರದಂದು ಬೆಳಗ್ಗೆ 6:00 ಗಂಟೆಯಿಂದ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ ನಡೆಯಲಿದೆ. ಹಾಗೂ ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಹಾಗೂ ಸಾಯಂಕಾಲ 6:30 ಕ್ಕೆ ದೀಪಾರಾಧನೆ ಹಾಗೂ ಚೆಂಡೆವಾದನ ನಡೆಯಲಿದೆ. ಹಾಗೂ ರಾತ್ರಿ 7:30 ಕ್ಕೆ ಮಹಾಪೂಜೆ ನಡೆಯಲಿದೆ. ಹಾಗೂ ರಾತ್ರಿ 8:00 ಗಂಟೆಯಿಂದ ದೇವರಬಲಿ ಉತ್ಸವ ಹೊರಡುವುದು, ವಸಂತ ಕಟ್ಟೆ ಪೂಜೆ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ಕಾರ್ಯಕ್ರಮ ನಡೆಯಲಿದೆ. ಆದೇ ರೀತಿ ಬೆಳಗ್ಗೆ 6:00 ಗಂಟೆಯಿಂದ ಸಂಜೆ 6:00 ಗಂಟೆಯ ತನಕ ಅರ್ಧ ಏಕಾಹ ಭಜನಾ ಕಾರ್ಯಕ್ರಮ ನಡೆಯಲಿದೆ ಹಾಗೂ ಸಾಯಂಕಾಲ 6 ರಿಂದ ಬಾಲಚಂದ್ರ ಪೆರಾಜೆ ಇವರಿಂದ ಸ್ಯಾಕ್ಸೋಫೋನ್ ಕಾರ್ಯಕ್ರಮ ನಡೆಯಲಿದೆ ಹಾಗೂ ರಾತ್ರಿ 12 ರಿಂದ ಶ್ರೀ ಹರಿಹರೇಶ್ವರ ಯಕ್ಷಗಾನ ಕಲಾ ಸಂಘ ಮತ್ತು ಅಥಿತಿ ಕಲಾವಿದರಿಂದ ಶಿವಪಂಚಾಕ್ಷರಿ ಮಹಿಮೆ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ. ಫೆ.22 ರಂದು ಉಳ್ಳಾಗುಳು ಮತ್ತು ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ.
✍ವರದಿ:-ಉಲ್ಲಾಸ್ ಕಜ್ಜೋಡಿ