- Thursday
- November 21st, 2024
ಸರಕಾರದ ಆದೇಶದಂತೆ ಸುಳ್ಯ ತಾಲೂಕಿನ ಎಲ್ಲಾ ರೈತರು ತಮ್ಮ ಜಮೀನಿನ ಪಹಣಿ (ಆರ್ಟಿಸಿ)ಗೆ ಆಧಾರ್ ನೋಂದಣಿ ಮಾಡಿಸಿಕೊಳ್ಳುವಂತೆ ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಸೂಚನೆ ನೀಡಿದ್ದಾರೆ. ಕರ್ನಾಟಕ ಸರಕಾರದ ನಿರ್ದೆಶನದಂತೆ ಕಂದಾಯ ಇಲಾಖೆ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಸಹಭಾಗಿತ್ವದಲ್ಲಿ ಆಧಾರ್ ಪಹಣಿ ಜೋಡಣೆ ಆಂದೋಲನ ನಡೆಯಲಿದೆ. ಈ ಕಾರ್ಯಕ್ರಮದ ಮೂಲಕ ರೈತರು ತಮ್ಮ ಜಮೀನಿನ...
ದ. ಕ. ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಇದರ ಸಹಯೋಗದಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಡಿ ಹೆಣ್ಣು ಶಿಶು ಪ್ರದರ್ಶನ, ಅನ್ನ ಪ್ರಾಶಣ ಮತ್ತು ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಫೆ. 19 ರಂದು ನಡ್ಕ ಶಿವಗೌರಿ ಕಲಾ ಮಂದಿರ...
ಅರಂತೋಡು ಗ್ರಾಮದ ಅಡ್ತಲೆ ಕುಟುಂಬದ ವೆಂಕಟರಮಣ ದೇವರ ಹರಿಸೇವೆ ಮತ್ತು ಧರ್ಮ ನಡಾವಳಿಯು ಫೆ.20 ಮತ್ತು ಫೆ.21 ರಂದು ಕುಟುಂಬದ ಧರ್ಮಚಾವಡಿಯಲ್ಲಿ ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯವರು, ಕುಟುಂಬಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಎಡಮಂಗಲ ಇದರ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಡಮಂಗಲಕ್ಕೆ 2 ಕೆ.ವಿ. ಇನ್ವರ್ಟರ್ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಮಾಲೆಂಗ್ರಿ, ನಿರ್ದೇಶಕರಾದ ಅವಿನಾಶ್ ದೇವರಮಜಲು ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಮೇಶ್ ಡಿ. ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ರಾಮಚಂದ್ರ, ಉಪಾಧ್ಯಾಯರಾದ ಪದ್ಮನಾಭ ಮತ್ತು ರಮೇಶ್ ಉಪಸ್ಥಿತರಿದ್ದರು.
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19 ರಂದು ಜರುಗಲಿದ್ದು, ನಡಾವಳಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.21 ರಂದು ನಡೆಯಿತು. ಈ ಸಂದರ್ಭದಲ್ಲಿ ಕಳಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ರೈ ಕಳಂಜ, ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ರಘುನಾಥ ರೈ ಕಳಂಜ, ಅಧ್ಯಕ್ಷರಾದ ಲಕ್ಷ್ಮೀಶ ರೈ ಗುರಿಕ್ಕಾನ, ಉಪಾಧ್ಯಕ್ಷರಾದ ಶೇಷಪ್ಪ...