ಸರಕಾರದ ಆದೇಶದಂತೆ ಸುಳ್ಯ ತಾಲೂಕಿನ ಎಲ್ಲಾ ರೈತರು ತಮ್ಮ ಜಮೀನಿನ ಪಹಣಿ (ಆರ್‌ಟಿಸಿ)ಗೆ ಆಧಾರ್ ನೋಂದಣಿ ಮಾಡಿಸಿಕೊಳ್ಳುವಂತೆ ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಸೂಚನೆ ನೀಡಿದ್ದಾರೆ.
ಕರ್ನಾಟಕ ಸರಕಾರದ ನಿರ್ದೆಶನದಂತೆ ಕಂದಾಯ ಇಲಾಖೆ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಸಹಭಾಗಿತ್ವದಲ್ಲಿ ಆಧಾರ್ ಪಹಣಿ ಜೋಡಣೆ ಆಂದೋಲನ ನಡೆಯಲಿದೆ. ಈ ಕಾರ್ಯಕ್ರಮದ ಮೂಲಕ ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ವಿವರ ಸೇರ್ಪಡೆ ಮಾಡಲು ಸುಳ್ಯ ನಾಡಕಚೇರಿ, ಸುಳ್ಯ ರೈತ ಸಂಪರ್ಕ ಕೇಂದ್ರ ಹಾಗೂ ಆಯಾ ಗ್ರಾಮಗಳ ಗ್ರಾಮ ಕರಣಿಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ
ಸರಕಾರದ ಯಾವುದೇ ಸವಲತ್ತುಗಳು ಪಡೆಯಲು ಪಹಣಿ ಆಧಾರ್ ನೋಂದಣಿ ಕಡ್ಡಾಯವಾಗಿರುವುದರಿಂದ ಸುಳ್ಯ ತಾಲೂಕಿನ ಎಲ್ಲ ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.