ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಸುಳ್ಯ ತಾಲೂಕು ಪಂಚಾಯತ್ ಕಟ್ಟಡದ ಉದ್ಘಾಟನಾ ಸಮಾರಂಭವು ಇಂದು (ಫೆ.26) ರಂದು ನಡೆಯಲಿದ್ದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಸುಳ್ಯ ಶಾಸಕ ಹಾಗೂ ಮೀನುಗಾರಿಕಾ, ಬಂದರು ಇಲಾಖಾ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್ ಸದಸ್ಯರುಗಳಾದ ಕೆ.ಪ್ರತಾಪ್ ಚಂದ್ರ ಶೆಟ್ಟಿ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
- Friday
- November 22nd, 2024