Ad Widget

ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ : ಗ್ರಾಮ ಮಟ್ಟದಿಂದ ಪಕ್ಷ ಸಂಘಟನೆ ಮಾಡುತ್ತೇನೆ – ಪಿ ಸಿ ಜಯರಾಂ

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಗಿ ನೇಮಕಗೊಂಡ ಪಿ. ಸಿ ಜಯರಾಮ ರವರಿಗೆ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ಫೆ.27 ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಜಯಪ್ರಕಾಶ್ ರೈ ಎನ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದಚ ಪಿ.ಸಿ. ಜಯರಾಮ ರವರಿಗೆ ಜವಾಬ್ದಾರಿ ಹಸ್ತಾಂತರ ಮಾಡಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಪಿ.ಸಿ.ಜಯರಾಂ ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟನೆಯ ಬಗ್ಗೆ ಒತ್ತು ನೀಡಲಾಗುವುದು ಹಾಗೂ ಅಗತ್ಯವಿದ್ದಲ್ಲಿ ಬೂತ್ ಮಟ್ಟದ ಸಮಿತಿಗಳ ಪುನರ್ ರಚನೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು. ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಪದಾಧಿಕಾರಿಗಳಾದ ಟಿ ಎಂ ಶಹೀದ್, ಕೃಷ್ಣಪ್ಪ ಜಿ, ಡಾ.ರಘು, ಭರತ್ ಮುಂಡೋಡಿ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ಕೋಲ್ಚಾರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಮೀದ್ ಕುತ್ತಮೊಟ್ಟೆ, ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು. ಪಕ್ಷದ ಚಟುವಟಿಗಳಿಗೆ ದುಡಿದ ನಂದರಾಜ್ ಸಂಕೇಶ, ಭವಾನಿಶಂಕರ ಕಲ್ಮಡ್ಕ ರನ್ನು ಸನ್ಮಾನಿಸಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!