ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನ ಸಮಾಜಕಾರ್ಯ ವಿಭಾಗದಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರಕ್ಕೆ ಅಧ್ಯಯನ ಭೇಟಿಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಭೇಟಿಯ ಸಂದರ್ಭದಲ್ಲಿ ಸರ್ವ ಶಿಕ್ಷಣ ಅಭಿಯಾನ ಹಾಗೂ ಶಾಲೆಗಳ ಕಾರ್ಯವೈಖರಿಯ ಬಗ್ಗೆ ಸಮನ್ವಯಾಧಿಕಾರಿ ಶ್ರೀಮತಿ ವೀಣಾ ಎಂ ಟಿ ಮಾಹಿತಿ ನೀಡಿದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುರಾ ಎಂ ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಚಂದ್ರಮತಿ ಕೆ ವಂದಿಸಿದರು.
- Friday
- November 22nd, 2024