Ad Widget

ಸಾಲ ವಸೂಲಾತಿಯಲ್ಲಿ ಸುಳ್ಯ ಪಿ ಎಲ್ ಡಿ ಬ್ಯಾಂಕ್ ಜಿಲ್ಲೆಯಲ್ಲಿ ಪ್ರಥಮ

ಸುಳ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 2019-20 ನೇ ಸಾಲಿನಲ್ಲಿ ಜೂನ್ ವೇಳೆಗೆ ಸಾಲ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದೆ. ಈ ಸಾಧನೆಯನ್ನು ಗುರುತಿಸಿ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕೊಡಮಾಡುವ ಪ್ರಶಸ್ತಿಯನ್ನು ಮಾನ್ಯ ಜಿಲ್ಲಾ ವ್ಯವಸ್ಥಾಪಕರಾದ ಮುತ್ತುರಾಜ್ ರವರು ಸುಳ್ಯ ಭೂ ಬ್ಯಾಂಕ್‌ಗೆ ಭೇಟಿ ನೀಡಿ ಅಧ್ಯಕ್ಷ ವಿಶ್ವನಾಥ ಬಿಳಿಮಲೆ ಇವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ವ್ಯವಸ್ಥಾಪಕ ಧನರಾಜ್ ಕೆ.ಸಿ. ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು, ಬ್ಯಾಂಕಿನ ಆಡಳಿತ ಮಂಡಳಿ ಉಪಾಧ್ಯಕ್ಷ ಪ್ರಭಾಕರ ನಾಯಕ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!