Ad Widget

ಎಣ್ಮೂರು : ಪೋಲೀಸ್ ಬೀಟ್ ಸಭೆ, ಮಾಹಿತಿ ಕಾರ್ಯಾಗಾರ

ಬೆಳ್ಳಾರೆ ಪೋಲೀಸ್ ಠಾಣೆ ಮತ್ತು ಶ್ರೀ ಸೀತಾರಾಮಾಂಜನೇಯ ಭಾರತಿ ಕುಣಿತ ಭಜನಾ ತಂಡ ಏಣ್ಮೂರು ಇದರ ಸಂಯುಕ್ತ ಆಶ್ರಯದಲ್ಲಿ ಏಣ್ಮೂರು ಮತ್ತು ಕಲ್ಮಡ್ಕ ಗ್ರಾಮಗಳ ಬೀಟ್ ಸಭೆ ಮತ್ತು ಮಾಹಿತಿ ಕಾರ್ಯಾಗಾರ ಜ. 1 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಬೆಳ್ಳಾರೆ ಠಾಣೆ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಮಾತನಾಡಿ ವಾಹನ ಚಾಲಕರಿಗೆ ಮತ್ತು ಮಾಲೀಕರಿಗೆ...

ಪಂಜ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಫೆ.1 ರಂದು ರಾತ್ರಿ ಜರುಗಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು , ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ರಾಮಯ್ಯ ಭಟ್, ಮಾಜಿ ಆಡಳಿತಾಧಿಕಾರಿ...
Ad Widget

ವಳಲಂಬೆ : ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವರ ಉತ್ಸವ ಬಲಿ

ವಳಲಂಬೆ : ವಿಜ್ರಂಭಣೆಯಿಂದ ನಡೆದ ದೇವರ ಉತ್ಸವ ಬಲಿ - ನಾಳೆ ರಕ್ತೇಶ್ವರಿ, ಧೂಮಾವತಿ ದೈವಗಳ ನೇಮೋತ್ಸವ https://youtu.be/Lt8CHywxBcA ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಗಣಪತಿ ಹೋಮ, ಏಕದಶ ರುದ್ರಾಭಿಷೇಕ, ನವಕ ಕಲಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಚೆಂಡೆವಾದನ, ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮ, ಚೆಂಡೆವಾದನ, ರಾತ್ರಿ ಮಹಾಪೂಜೆ ಮತ್ತು...

ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ನಂದಕುಮಾರ್ ಅಧಿಕಾರ ಸ್ವೀಕಾರ

ಸುಳ್ಯ ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ನಂದಕುಮಾರ್ ರವರು ಫೆ.1 ರಂದು ಅಧಿಕಾರ ಸ್ವೀಕರಿಸಿದ್ದಾರೆ. ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾ.ಸುಬ್ರಹ್ಮಣ್ಯ ಎಂ.ಆರ್. ರವರು ಜ.31 ರಂದು ನಿವೃತ್ತರಾಗಿದ್ದು ಡಾ. ನಂದಕುಮಾರ್ ರಿಗೆ ಅಧಿಕಾರ ಹಸ್ತಾಂತರಿಸಿದರು.

ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳಿಗೆ ಚುನಾವಣೆ ನಡೆಸಲು ಅಧಿಕಾರಿಗಳ ನೇಮಕ

ಗ್ರಾಮ ಪಂಚಾಯತ್ ಗಳಿಗೆ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ಪ್ರಕಟವಾಗಿದ್ದು ಇನ್ನು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಬೇಕಾಗಿದೆ. ಈ ಚುನಾವಣೆ ನಡೆಸಲು 25 ಗ್ರಾಮ ಪಂಚಾಯತ್ ಗಳಿಗೆ ಅಧಿಕಾರಿಗಳ ನೇಮಕ ಮಾಡಲಾಗಿದ್ದು ಅವರು ಚುನಾವಣೆಯ ದಿನ ನಿಗದಿಪಡಿಸಲಿದ್ದಾರೆ.

ಮರ್ಕಂಜ : ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಗೆ ಮನವಿ

ಮರ್ಕಂಜದಲ್ಲಿ ಆರಂಭವಾಗಿರುವ ಗಣಿಗಾರಿಕೆ ಭಾರಿ ಸ್ಪೋಟಕಗಳನ್ನು ಬಳಸಿ ನಡೆಯುತ್ತಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಗಣಿಗಾರಿಕೆ ಮುಂದುವರೆದರೇ ಸಮೀಪದ ಮನೆ,ಪರಿಸರ ಹಾಗೂ ಕಲ್ಲು ಸಾಗಾಟದಿಂದ ರಸ್ತೆ ಕೂಡ ಹಾನಿಯಾಗಲಿದೆ ಹಾಗೂ ಭಾರಿ ಸ್ಪೋಟಕ ಬಳಸುವುದರಿಂದ ಕೆರೆ,ಬಾವಿ ಹಾಗೂ ಅಂತರ್ಜಲ ಕೂಡ ಬರಿದಾಗುವ ಭೀತಿ ಜನರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಸಮಿತಿ ರಚಿಸಿ ಹೋರಾಟಕ್ಕಿಳಿದಿದ್ದಾರೆ. ಗಣಿಗಾರಿಕೆಯನ್ನು ನಿಲ್ಲಿಸಬೇಕೆಂದು...

ಎನ್ನೆಂಸಿ: ಸಂಶೋಧನಾ ಘಟಕ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನ ಸಂಶೋಧನಾ ಘಟಕ ವತಿಯಿಂದ "ಸಂಶೋಧನಾ ನೈತಿಕತೆ ಮತ್ತು ಕೃತಿಚೌರ್ಯ" ಎಂಬ ವಿಷಯದ ಕುರಿತು ಒಂದು ದಿನದ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ನಿಟ್ಟೆಯ ಪಾರ್ಮಸಟಿಕಲ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ವಿಜಯಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಪೂವಪ್ಪ ಕಣಿಯೂರು ಕಾರ್ಯಕ್ರಮದ ಅಧ್ಯಕ್ಷತೆ...

ಕಳಂಜ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ. 19 ರಂದು ಜರುಗಲಿದ್ದು ಇದರ ಪೂರ್ವಭಾವಿಯಾಗಿ ಇಂದು (ಪೆ. 01) ಕೊಳ್ಳಿ ಮುಹೂರ್ತ ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.
error: Content is protected !!