- Saturday
- April 19th, 2025

ಜನನಿ ಫ್ರೆಂಡ್ಸ್ ಕ್ಲಬ್ ಗುಂಡ್ಯ, ಅಲೆಟ್ಟಿ-ಬಡ್ಡಡ್ಕ ಹಾಗೂ ಊರ-ಪರವೂರ ಕಲಾಭಿಮಾನಿಗಳ ಸಹಕಾರದೊಂದಿಗೆ ಶ್ರೀ ಅಯ್ಯಪ್ಪ ಭಜನಾ ಮಂದಿರ ಬಡ್ಡಡ್ಡ-ಕಲ್ಲಪಳ್ಳಿ ಇದರ ಪುನಃ ಪ್ರತಿಷ್ಠೋತ್ಸವದ ಅಂಗವಾಗಿ 9ನೇ ವರ್ಷದ ಯಕ್ಷಗಾನ ಬಯಲಾಟ ಮಾ. 07 ಭಾನುವಾರದಂದು ರಾತ್ರಿ ಗಂಟೆ 10 ಕ್ಕೆ ಬಡ್ಡಡ್ಕ ಶಾಲಾ ವಠಾರದಲ್ಲಿ ಶ್ರೀ ವನದುರ್ಗಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ದೇಂತಡ್ಕ -...

ಕನ್ನಡ ಸಾಹಿತ್ಯ ಪರಿಷತ್ ಮತ್ತು 25 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ನೇತೃತ್ವದಲ್ಲಿ ಹಿರಿಯ ಸಾಹಿತಿ ಡಾ.ಪೂವಪ್ಪ ಕಣಿಯೂರು ಅಧ್ಯಕ್ಷತೆಯಲ್ಲಿ ನೆಹರು ಸ್ಮಾರಕ ಮಹಾ ವಿದ್ಯಾಲಯದಲ್ಲಿ ಇಂದು ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಕನ್ನಡ ಭುವನೇಶ್ವರಿ ಮೆರವಣಿಗೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಅಕ್ಷಯ್...

ಆಂಜನಾದ್ರಿ ವಾದ್ಯಕಲಾ ತಂಡದ ಅಡ್ಕಾರು ಇದರ 2 ನೇ ತಂಡದ ರಂಗಪ್ರವೇಶ ಫೆ.18 ರಂದು ಅಡ್ಕಾರ್ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗುರುಗಳಾದ ಮನೀಶ್ ಇವರನ್ನು ಸನ್ಮಾನಿಸಲಾಯಿತು. https://youtu.be/u8_pRqhZ1rc

ಮಡಪ್ಪಾಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿ, ಉಪಾಧ್ಯಕ್ಷರಾಗಿ ಉಷಾ ಜಯರಾಂ ಅವಿರೋಧವಾಗಿ ಆಯ್ಕೆಯಾದರು. ಇಲ್ಲಿ 5 ಸ್ಥಾನಗಳ ಪೈಕಿ ಕಾಂಗ್ರೆಸ್ 4 ಹಾಗೂ ಬಿಜೆಪಿ 1 ಸ್ಥಾನ ಪಡೆದಿತ್ತು.

ದೇವಚಳ್ಳ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾಗಿ ರಾಜೇಶ್ವರಿ ಮಣಿಕಂಠ ಮಾವಿನಕಟ್ಟೆ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ. ಮಹಿಳೆಗೆ ನಿಗದಿಯಾಗಿದ್ದು, ‘ಬಿ’ ಮಹಿಳೆ ಅಲ್ಲಿ ಇಲ್ಲದಿರುವುದರಿಂದ ‘ಎ’ ಮಹಿಳೆಯಿಂದ ನಾಮಪತ್ರ ಸ್ವೀಕರಿಸಬಹುದೆಂಬ ಬಗ್ಗೆ ಚುನಾವಣಾ ಆಯೋಗದಿಂದ ಲಿಖಿತ ಆದೇಶ ಬಾರದಿರುವ ಕಾರಣ ಅಧ್ಯಕ್ಷತೆಗೆ ಚುನಾವಣೆ ನಡೆಸದಿರಲು ಚುನಾವಣಾಧಿಕಾರಿ ನಿರ್ಧರಿಸಿದ್ದಾರೆ.ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಸ್ವಾಭಿಮಾನಿ...

ಉಬರಡ್ಕ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಚಿತ್ರಕುಮಾರಿ ಪಾಲಡ್ಕ, ಉಪಾಧ್ಯಕ್ಷರಾಗಿ ಪ್ರಶಾಂತ್ ಪಾನತ್ತಿಲ ಆಯ್ಕೆಯಾಗಿದ್ದಾರೆ. ಇಲ್ಲಿ ಬಿಜೆಪಿ ಬೆಂಬಲಿತರಿಗೆ ಬಹುಮತವಿದ್ದರೂ ಮೀಸಲಾತಿ ನಿಗದಿಯಿಂದ ಅಧಿಕಾರ ಕಾಂಗ್ರೆಸ್ ಪಾಲಾಗಿದೆ. ಉಪಾಧ್ಯಕ್ಷ ಸ್ಥಾನ ಮಾತ್ರ ಬಿಜೆಪಿಗೆ ಲಭಿಸಿದೆ. 9 ಸ್ಥಾನಗಳ ಪೈಕಿ ಬಿಜೆಪಿ 6 ಹಾಗೂ ಕಾಂಗ್ರೆಸ್ 3 ಸ್ಥಾನ ಪಡೆದಿತ್ತು.

ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಜಾನಕಿ ಶಾಂತಿನಗರ, ಉಪಾಧ್ಯಕ್ಷರಾಗಿ ವನಿತಾ ಸುವರ್ಣ ಬಾಮೂಲೆ ಅವಿರೋಧ ಆಯ್ಕೆಯಾಗಿದ್ದಾರೆ. ಇಲ್ಲಿ ಎಲ್ಲಾ 7 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

ನಾಲ್ಕು ವರ್ಷಗಳ ಹಿಂದೆ ಅಗಲಿದ ಸುಳ್ಯದ ಪತ್ರಕರ್ತ ದಿ.ಚೇತನರಾಂ ಇರಂತಕಜೆ ಇವರ ಸಂಸ್ಮರಣೆ ಮತ್ತು ಉಪನ್ಯಾಸ ಕಾರ್ಯಕ್ರಮ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಫೆ. 17ರಂದು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿತು. ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ ಇವರ ಅಧ್ಯಕ್ಷತೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲೆ ಶ್ರೀಮತಿ ಯಶೋಧ ರವರು ದೀಪ...

ಅಜ್ಜಾವರ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸತ್ಯವತಿ ದೊಡ್ಡೇರಿ, ಉಪಾಧ್ಯಕ್ಷೆಯಾಗಿ ಲೀಲಾ ಮನಮೋಹನ್ ಮುಡೂರು ಆಯ್ಕೆಯಾದರು. ಇಲ್ಲಿ ಕಾಂಗ್ರೆಸ್ ಬಹುಮತವಿದ್ದರೂ ಮೀಸಲಾತಿ ನಿಗದಿಯಿಂದ ಅಧಿಕಾರ ಬಿಜೆಪಿ ಪಾಲಾಗಿದೆ. ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಸಮಧಾನ ಪಟ್ಟುಕೊಳ್ಳಬೇಕಿದೆ. ಒಟ್ಟು 18 ಸ್ಥಾನಗಳ ಪೈಕಿ ಕಾಂಗ್ರೆಸ್ 10, ಬಿಜೆಪಿ 5, ಪಕ್ಷೇತರರು 3 ಸ್ಥಾನ ಪಡೆದಿದ್ದರು.

All posts loaded
No more posts