

ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಮಾ5 ರಂದು ಎಲಿಮಲೆಯ ದೇವಚಳ್ಳ ಮಾ.ಹಿ. ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಭೇಟಿ ನೀಡಿದರು. ಪ್ರಾಥಮಿಕ ಹಾಗೂ ಪ್ರೌಡಶಾಲೆಯಲ್ಲಿ ನಡೆಯುತ್ತಿರುವ ಉತ್ತಮ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆ ಶತಮಾನೋತ್ಸವದ ಸಂಭ್ರಮ ನಡೆಯಲಿರುವುದರಿಂದ ವಿಶೇಷ ಅನುದಾನ ಒದಗಿಸಬೇಕೆಂದು ಮನವಿ ಸಲ್ಲಿಸಲಾಯಿತು. ಖಂಡಿತವಾಗಿ ಕೊಡುತ್ತೇನೆ ಕಾರ್ಯಕ್ರಮಕ್ಕೆ ಕರೆಯಿರಿ ಬರುತ್ತೇನೆ ಎಂದು ಸಚಿವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ್, ಮುಖ್ಯ ಶಿಕ್ಷಕ ಶ್ರೀಧರ ಕೆ, ಎಸ್ ಡಿ ಎಂ ಸಿ ಅಧ್ಯಕ್ಷ ರಮಾನಂದ ಎಲಿಮಲೆ, ಮುಖ್ಯ ಶಿಕ್ಷಕ ಗೋಪಿನಾಥ್ ಮೆತ್ತಡ್ಕ, ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಸದಸ್ಯೆ ವಂದನಾ ಹೊಸ್ತೋಟ, ದೇವಚಳ್ಳ ಕ್ಲಸ್ಟರ್ ಸಿ ಆರ್ ಪಿ ಸಂತೋಷ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಹಾಗೂ ಕಾರ್ಯದರ್ಶಿ ರಾಜಗೋಪಾಲ ಅಂಬೆಕಲ್ಲು, ಶಿಕ್ಷಕರು, ಪೋಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



